ಮಡಿಕೇರಿ, ಆ. ೬: ೨೦೨೩-೨೪ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು ಕೊಡಗು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಜಿಲ್ಲೆಯ ಮುಖ್ಯ ಬಹುವಾರ್ಷಿಕ ಬೆಳೆಗಳಾದ ಕಾಳುಮೆಣಸು ಮತ್ತು ಅಡಿಕೆ ಬೆಳೆಗಳಿಗೆ ರೈತರು ನೋಂದಾಯಿಸಿಕೊಳ್ಳಲು ಜುಲೈ ೩೧ ರವರೆಗೆ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ಸರ್ಕಾರದ ಆದೇಶದಂತೆ ಆಗಸ್ಟ್ ೭ ರವರೆಗೆ ಬೆಳೆ ವಿಮೆ ಪ್ರೀಮಿಯಂ ಪಾವತಿಗೆ ಅವಧಿ ವಿಸ್ತರಿಸಲಾಗಿದೆ. ರೈತರು ಇದನ್ನು ಸದುಪಯೋಗ ಪಡೆದುಕೊಳ್ಳುವುದು ಹಾಗೂ ಹತ್ತಿರದ ಬ್ಯಾಂಕ್‌ಗಳಲ್ಲಿ ಅಥವಾ ಗ್ರಾಮ ಪಂಚಾಯಿತಿ ಮಟ್ಟದಲ್ಲಿರುವ ಗ್ರಾಮ ಒನ್ ಕೇಂದ್ರಗಳಲ್ಲಿ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ವಿಮೆ ಯೋಜನೆಯನ್ನು ನೋಂದಾಯಿಸಿಕೊಳ್ಳಬಹುದು ಎಂದು ತೋಟಗಾರಿಕೆ ಉಪ ನಿರ್ದೇಶಕ ಪ್ರಮೋದ್ ತಿಳಿಸಿದ್ದಾರೆ.