ಮಡಿಕೇರಿ, ಆ. ೭: ೨೦೨೩-೨೪ನೇ ಸಾಲಿಗೆ ಕೊಡಗು ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯ ಮಡಿಕೇರಿ ಹಾಗೂ ಕುಶಾಲನಗರದ ವಿದ್ಯಾರ್ಥಿ ನಿಲಯಗಳಿಗೆ ಪಿಯುಸಿ ನಂತರ (ಪದವಿ, ಸ್ನಾತಕೋತ್ತರ, ಇಂಜಿನಿಯರಿAಗ್, ಬಿಎಸ್‌ಸಿ ನರ್ಸಿಂಗ್) ಕೋರ್ಸ್ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಪ್ರವೇಶಾತಿಗೆ ರಾಜ್ಯ ವಿದ್ಯಾರ್ಥಿ ನಿಲಯ hಣಣಠಿs://shಠಿ.ಞಚಿಡಿಟಿಚಿಣಚಿಞಚಿ.gov.iಟಿ ತಂತ್ರಾAಶದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ತಾ. ೧೬ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ದೂ. ೦೮೨೭೨-೨೨೫೫೨೮/ ೨೨೦೨೧೪, ನಿಲಯ ಪಾಲಕರು ೯೭೪೨೧೧೬೬೦೧, ೯೯೭೨೧೭೧೨೬೬ ಹಾಗೂ ಇಲಾಖಾ ವೆಬ್‌ಸೈಟ್ hಣಣಠಿs://ಜom.ಞಚಿಡಿಟಿಚಿಣಚಿಞಚಿ.gov.iಟಿ ನಿಂದ ಅಲ್ಪಸಂಖ್ಯಾತರ ಎಲ್ಲಾ ಅರ್ಹ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಮತ್ತು ಇತರೆ ಸೌಲಭ್ಯಗಳ ಮಾಹಿತಿ ಪಡೆಯಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಂ. ದಿವಾಕರ ತಿಳಿಸಿದ್ದಾರೆ.