ಮಡಿಕೇರಿ, ಆ. ೭: ಮೊಗೇರ್ ಜಾತಿಯು ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಸೇರಿರುವ ಹಿನ್ನೆಲೆ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸರ್ಕಾರದ ಆದೇಶದಂತೆ ಪ್ರವರ್ಗ-೧ ಅನುಕ್ರಮ ಸಂಖ್ಯೆ:೬(ಚಿe)ರಲ್ಲಿ ‘ಮೊಗೇರ್’ (ಒಔಉಇಖ) ಜಾತಿಯನ್ನು ಕೈ ಬಿಡುವ ಬಗ್ಗೆ ಸಾರ್ವಜನಿಕರು, ಸಂಘ ಸಂಸ್ಥೆಗಳಿAದ ಆಕ್ಷೇಪಣೆ, ತಕರಾರುಗಳನ್ನು ಆಹ್ವಾನಿಸಲಾಗಿದೆ. ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಆಗಸ್ಟ್ ೧೦ ರೊಳಗೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿ, ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ ಹತ್ತಿರ, ಮಡಿಕೇರಿ ಇಲ್ಲಿಗೆ ಸಲ್ಲಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್. ಮಂಜುನಾಥ್ ತಿಳಿಸಿದ್ದಾರೆ.