ಮಡಿಕೇರಿ, ಆ. ೭: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ವತಿಯಿಂದ ವಿಶ್ವ ಹೆಪಟೈಟಿಸ್ ದಿನವು ತಾ.೮ ರಂದು (ಇಂದು) ಬೆಳಗ್ಗೆ ೧೧ ಗಂಟೆಗೆ ನಗರದ ಜಿಲ್ಲಾ ಬೋಧಕ ಆಸ್ಪತ್ರೆ ಸೆಮಿನಾರ್ ಹಾಲ್(ಜಿಲ್ಲಾ ಆಸ್ಪತ್ರೆ) ನಲ್ಲಿ ನಡೆಯಲಿದೆ.

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಮತ್ತು ನಿರ್ದೇಶಕ ಡಾ.ಕೆ.ಬಿ.ಕಾರ್ಯಪ್ಪ, ಜಿಲ್ಲಾ ಶಸ್ತç ಚಿಕಿತ್ಸಕ ಡಾ.ನಂಜುAಡಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಗೋಪಿನಾಥ್, ಐಎಂಎ ಅಧ್ಯಕ್ಷ ಡಾ.ಶ್ಯಾಮ್ ಅಪ್ಪಣ್ಣ, ಜಿಲ್ಲಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ರೂಪೇಶ್ ಗೋಪಾಲ್, ಸ್ಥಾನೀಯ ವೈದ್ಯ ಡಾ.ಸತೀಶ್, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ಯು. ಚೇತನ್ ಮತ್ತು ಎನ್‌ವಿಹೆಚ್‌ಸಿಪಿ ಕಾರ್ಯಕ್ರ ಮಾಧಿಕಾರಿ ಡಾ.ಎನ್.ಆನಂದ್, ನೋಡಲ್ ಅಧಿಕಾರಿ ಡಾ.ಅಬ್ದುಲ್ ಅಜೀಜ್ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ.