ಮಡಿಕೇರಿ, ಆ. ೬: ಕಾಂಗ್ರೆಸ್ ರಾಷ್ಟಿçÃಯ ಅಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕ ಮಲ್ಲಿ ಕಾರ್ಜುನ ಖರ್ಗೆ ಅವರ ಕುರಿತು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿರುವುದು ಖಂಡನೀ ಯವೆಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹಿರಿಯ ಶಾಸಕರಾಗಿರುವ ಆರಗ ಜ್ಞಾನೇಂದ್ರ ಅವರು ಸಚಿವರಾಗಿಯೂ ಕಾರ್ಯನಿರ್ವ ಹಿಸಿದ್ದಾರೆ. ಆದರೆ ವಿರೋಧ ಪಕ್ಷದ ನಾಯಕನಿಗೆ ಗೌರವ ನೀಡುವಷ್ಟು ಕನಿಷ್ಟ ಜ್ಞಾನ ಅವರಲ್ಲಿ ಇಲ್ಲದಾಗಿದೆ. ಖರ್ಗೆ ಅವರ ಮೈಬಣ್ಣದ ಬಗ್ಗೆ ನೀಡಿರುವ ಹೇಳಿಕೆ ಆರಗ ಅವರ ಘನತೆಗೆ ಶೋಭೆ ತರುವುದಿಲ್ಲ ಎಂದು ಟೀಕಿಸಿದ್ದಾರೆ.

ಆರಗ ಜ್ಞಾನೇಂದ್ರ ಅವರು ತಕ್ಷಣ ಬಹಿರಂಗ ಕ್ಷಮೆಯಾ ಚಿಸಬೇಕು. ಕೇವಲ ವಿಷಾದ ವ್ಯಕ್ತಪಡಿಸಿ ವಿಷಯಾಂತರ ಮಾಡುವ ಪ್ರಯತ್ನ ಮಾಡಬಾರದು ಎಂದು ಒತ್ತಾಯಿಸಿದ್ದಾರೆ.