ಚೆಯ್ಯಂಡಾಣೆ, ಆ. ೭: ಇತಿಹಾಸ ಪ್ರಸಿದ್ಧ ನಾಪೋಕ್ಲು ಸಮೀಪದ ಚೆರಿಯಪರಂಬು ದರ್ಗಾ ಶರೀಫ್‌ನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಶಹೀದ್ ಅಬ್ದುಲ್ ರಹ್ಮಾನ್ ವಲಿಯುಲ್ಲಾಹಿ (ನ.ಮ) ಹಾಗೂ ಹೌಲಿಯಾಗಳ ಹೆಸರಿನಲ್ಲಿ ಪ್ರತಿವರ್ಷ ಆಚರಿಸಿಕೊಂಡು ಬರುತ್ತಿರುವ ಉರೂಸ್ ಸಮಾರಂಭವು ೨೦೨೪ ಫೆ.೯ ರಿಂದ ೧೩ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಚೆರಿಯಪರಂಬು ಮುಹಿಯುದ್ದೀನ್ ಜುಮಾ ಮಸೀದಿಯ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.