ಮುಳ್ಳೂರು, ಆ. ೭: ಕಳೆದ ೩೦ ವರ್ಷಗಳಿಂದ ಶನಿವಾರಸಂತೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕನಾಗಿದ್ದ ಮಲ್ಲಿಕಾರ್ಜುನ ಅವರು ಸೇವೆಯಿಂದ ವಯೋನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಶಾಲೆಯ ಸಭಾಂಗಣದಲ್ಲಿ ಮಲ್ಲಿಕಾರ್ಜುನ್ ಅವರಿಗೆ ಶಾಲಾ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ. ಸುರೇಶ್, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೆದ್, ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಕರುಂಬಯ್ಯ ಮಾತನಾಡಿದರು. ಸಮಾರಂಭದಲ್ಲಿ ನಿವೃತ್ತ ದೈಹಿಕ ಶಿಕ್ಷಕ ಸಿ.ಎಲ್. ಸುಬ್ಬಯ್ಯ, ಬಿಆರ್‌ಪಿ ಲೋಕೇಶ್, ಶನಿವಾರಸಂತೆ ಕ್ಲಸ್ಟರ್ ಸಿಆರ್‌ಪಿ ಸಿ.ಕೆ. ದಿನೇಶ್, ಎಸ್‌ಡಿಎಂಸಿ ಅಧ್ಯಕ್ಷೆ ಶಾಲಿನಿ, ಶಾಲಾ ಮುಖ್ಯ ಶಿಕ್ಷಕಿ ಬಿ.ಟಿ. ವಿಶ್ವನಾಥ್, ಶಾಲೆಯ ಶಿಕ್ಷಕರು, ಪೋಷಕರ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು.