ಚೆಯ್ಯಂಡಾಣೆ, ಆ. ೬: ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ಕ್ಯಾಬಿನೆಟ್ ದರ್ಜೆ ಸ್ಥಾನವನ್ನು ಅಲಂಕರಿಸಿ ಮೊದಲ ಬಾರಿಗೆ ನಾಪೋಕ್ಲುವಿಗೆ ಆಗಮಿಸಿದ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ನಾಪೋಕ್ಲುವಿನಲ್ಲಿ ಜಿಲ್ಲಾ ಡಿಸಿಸಿ ಉಪಾಧ್ಯಕ್ಷ ಅಬ್ದುಲ್ ರೆಹ್ಮಾನ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದರು.

ಈ ಸಂದರ್ಭ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ. ಇಸ್ಮಾಯಿಲ್, ವಲಯಾಧ್ಯಕ್ಷ ಮಾಚೆಟ್ಟಿರ ಕುಶು ಕುಶಾಲಪ್ಪ, ನಾಪೋಕ್ಲು ಯೂತ್ ಕಾಂಗ್ರೆಸ್ ಅಧ್ಯಕ್ಷ ಸಿರಾಜ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಚ್.ಎಸ್. ಪಾರ್ವತಿ, ಉಪಾಧ್ಯಕ್ಷ ಮಹಮ್ಮದ್, ಗ್ರಾಮ ಪಂಚಾಯಿತಿ ಸದಸ್ಯರು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.