ಮಡಿಕೇರಿ, ಆ. ೬: ಮಾಯಮುಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ತಾ. ೮ರಂದು ಬೆಳಿಗ್ಗೆ ೧೦.೩೦ಕ್ಕೆ ಕಾಫಿ ಬೇಸಾಯ ಕ್ರಮ ಹಾಗೂ ಪ್ರಸ್ತುತ ಕಾಫಿ ಬೇಸಾಯದಲ್ಲಿ ಬೆಳೆಗಾರರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಕಾಫಿ ಬೋರ್ಡ್ ವತಿಯಿಂದ ಮಾಹಿತಿ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ. ಗ್ರಾಮಸ್ಥರು ಹಾಗೂ ಸದಸ್ಯರು ಭಾಗವಹಿಸಿ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳುವಂತೆ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರು ಕೋರಿದ್ದಾರೆ.