ಮಡಿಕೇರಿ, ಆ. ೭: ಮೂರ್ನಾಡು ಮಾರುತಿ ಸಂಯುಕ್ತ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜು ಹಾಗೂ ಕ್ಲಬ್‌ಕೂರ್ಗ್ ಇನ್ಸಿ÷್ಟಟ್ಯೂಟ್ ಇವರ ಸಂಯುಕ್ತ ಆಶ್ರಯದಲ್ಲಿ ಮರಗೋಡು ಭಾರತಿ ಸಂಯುಕ್ತ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಸುಮಾರು ೨೦ ಕಿ.ಮೀ. ಸೈಕಲ್ ಜಾಥಾ ನಡೆಯಿತು.

ಮರಗೋಡು ಪಟ್ಟಣ ಮತ್ತು ಭಾರತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಲ್ಲಿ ಪರಿಸರದ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಲಾಯಿತು. ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಾಣ ಮಾಡುವಂತೆ ಪಣ ತೊಡಲಾಯಿತು. ಮಾರುತಿ ವಿದ್ಯಾಸಂಸ್ಥೆಯ ಅನೇಕ ವಿದ್ಯಾರ್ಥಿಗಳು ಸೈಕಲ್ ಜಾಥಾದಲ್ಲಿ ಭಾಗವಹಿಸಿ, ಸ್ವಚ್ಛ, ಸುಂದರ ಪರಿಸರದ ರಕ್ಷಣೆಗೆ ಕೈಜೋಡಿಸಲಾಯಿತು.