ಮಡಿಕೇರಿ, ಆ. ೬: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಸರ್ಕಾರ ನಡೆಸಲಿರುವ ಪಿಡಿಓ, ಎಫ್‌ಡಿಎ, ಎಸ್‌ಡಿಎ ಹುದ್ದೆಗಳ ನೇಮಕಾತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ೪೫ ದಿನಗಳ ತರಬೇತಿ ನೀಡಲು ನಿರ್ಧರಿಸಿದೆ.
ಆಸಕ್ತರು ತಾ. ೧೪ ರೊಳಗೆ ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೪ ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ದೂ.ಸಂ. ೦೮೨೧-೨೫೧೫೯೪೪ ನ್ನು ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವರಾದ ಪ್ರೊ. ಕೆ.ಎಲ್.ಎನ್. ಮೂರ್ತಿ ಅವರು ತಿಳಿಸಿದ್ದಾರೆ.