ಶನಿವಾರಸಂತೆ, ಆ. ೭: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಿಕ್ಷಣ ಇಲಾಖೆ ಹಾಗೂ ಸೇಕ್ರೆಡ್ ಹಾರ್ಟ್ ಶಾಲೆ ಮತ್ತು ಪದವಿ ಪೂರ್ವ ಕಾಲೇಜು ಸಹಭಾಗಿತ್ವದಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಸಂವಹನ ಕಾರ್ಯಕ್ರಮವನ್ನು ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಸಿವಿಲ್ ನ್ಯಾಯಾಧೀಶ ಹಾಗೂ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಕೆ.ಬಿ. ಪ್ರಸಾದ್ ಅವರು ಮಾತನಾಡಿ, ಫೋಕ್ಸೋ ಕಾಯ್ದೆ ಕುರಿತು ಮಾಹಿತಿ ನೀಡಿದರು. ತಾಲೂಕು ವಕೀಲರ ಸಂಘದ ಅಧ್ಯಕ್ಷ ಕೆ.ಹೆಚ್. ವಿಠಲ್ ಮಾತನಾಡಿ, ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅತ್ಯಗತ್ಯ ಎಂದು ಮಾಹಿತಿ ನೀಡಿ ಜಾಗೃತಿ ಮೂಡಿಸಿದರು.
ಶನಿವಾರಸಂತೆ ಕ್ಲಸ್ಟರ್‌ನ ಸಂಪನ್ಮೂಲ ವ್ಯಕ್ತಿ ಸಿ.ಕೆ. ದಿನೇಶ್, ವಿದ್ಯಾಸಂಸ್ಥೆ ಪ್ರಾಂಶುಪಾಲ ಫಾದರ್ ಸಬಾಸ್ಟಿನ್ ಮೈಕಲ್, ಫಾದರ್ ಫ್ರಾನ್ಸಿಸ್, ಪ್ರದೀಪ್ ಉಪಸ್ಥಿತರಿದ್ದರು. ಪ್ರಮುಖ ಬಿ.ಎಸ್. ಜಯಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಿಕ್ಷಕಿಯರಾದ ವಿದ್ಯಾ ನಿರೂಪಿಸಿ, ಭವಿತಾ ವಂದಿಸಿದರು.