ಕುಶಾಲನಗರ, ಆ. ೮: ಕೊಡಗು-ಮೈಸೂರು ಗಡಿಭಾಗದ ಕೊಪ್ಪ, ಬೈಲಕೊಪ್ಪ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮತ್ತು ಇತರ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಕೂಡಲೇ ಎರಡು ಜಿಲ್ಲೆಗಳ ಉಪವಿಭಾಗಗಳ ಅಧಿಕಾರಿಗಳ ಸಭೆಯನ್ನು ಕರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಉಪಪೊಲೀಸ್ ಮಹಾನಿರೀಕ್ಷಕ (ಡಿಐಜಿಪಿ) ಡಾ. ಬೋರಲಿಂಗಯ್ಯ ತಿಳಿಸಿದ್ದಾರೆ.
(ಮೊದಲ ಪುಟದಿಂದ) ಅಜಯ್ ಕುಮಾರ್, ಅಪರಾಧ ವಿಭಾಗದ ಪಿಎಸ್ಐ ಮಹಾಲಿಂಗಯ್ಯ ನೇತೃತ್ವದಲ್ಲಿ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿದೆ. ಟಿಬೆಟಿಯನ್ ಶಿಬಿರದ ಒಂದನೇ ಕ್ಯಾಂಪ್ ಟಿಸಿಎಸ್ ಆವರಣದಲ್ಲಿ ಕೇರಳ ನೋಂದಾವಣೆಯ ಮಾರುತಿ ಸ್ವಿಫ್ಟ್ ಕಾರ್ (ಕೆಎಲ್೫೮-ಬಿ೨೯೮೩)ನಲ್ಲಿ ಮೂರು ಬ್ಯಾಗ್ಗಳಲ್ಲಿ ಸುಮಾರು ೩೦ ಕೆಜಿ ಗಾಂಜಾ ತುಂಬಿಸಿ ಮಾರಾಟ ಮಾಡಲು ಹುನ್ನಾರ ನಡೆಸುತ್ತಿದ್ದರು.
ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಕುಮಾರಸ್ವಾಮಿ, ವೀರೇಂದ್ರ ಕುಮಾರ್, ಮಹಾದೇವಯ್ಯ, ಮುದ್ದುರಾಜ್, ಚೇತನ್, ಸುರೇಶ್, ರಾಜೇಶ್, ಗೋಪಾಲ್ ಮತ್ತು ಪ್ರದೀಪ್ ಪಾಲ್ಗೊಂಡಿದ್ದರು. ಬೈಲಕುಪ್ಪೆ ಪೊಲೀಸ್ ತಂಡದ ಕಾರ್ಯಾಚರಣೆಯನ್ನು ದಕ್ಷಿಣ ವಲಯದ ಪೊಲೀಸ್ ಮಹಾನಿರೀಕ್ಷಕರು ಸೇರಿದಂತೆ ಪೊಲೀಸ್ ವರಿಷ್ಠಾಧಿಕಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಗಾಂಜಾ ಮಾರಾಟ ಯತ್ನ
ಜಿಲ್ಲೆಯ ಇಬ್ಬರು ಸೇರಿದಂತೆ ಐವರ ಬಂಧನ
ಕೊಡಗು ಜಿಲ್ಲೆಯ ಗಡಿಭಾಗ ಬೈಲಕುಪ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಅಂತರರಾಜ್ಯ ಪೆಡ್ಲರ್, ಜಿಲ್ಲೆಯ ಇಬ್ಬರು ಸೇರಿದಂತೆ ಒಟ್ಟು ಐದು ಮಂದಿಯನ್ನು ಹಾಗೂ ಭಾರಿ ಪ್ರಮಾಣದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಸಂದರ್ಭ ಒರಿಸ್ಸಾ ಮೂಲದ ವಿಕ್ರಂ (೨೫), ಕುಶಾಲನಗರದ ಇಂದಿರಾ ಬಡಾವಣೆಯ ನಯನ್ ದೀಪ್ (೨೮), ಕೊಪ್ಪ ಗ್ರಾಮದ ಭರತ್ ಕುಮಾರ್ (೩೦), ಬೋಯಿಕೇರಿ ಕಡಗದಾಳು ಬಳಿಯ ಜಂಶೀರ್ (೨೬) ಮತ್ತು ಪಿರಿಯಾಪಟ್ಟಣ ಬಳಿಯ ಅನಿಲ್ ಕುಮಾರ್(೨೪) ಸೇರಿದಂತೆ ಐದು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ಬಂಧಿಸಲಾಗಿದೆ.
ಈ ಬಗ್ಗೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಬೈಲಕುಪ್ಪೆ ಪೊಲೀಸ್ ಠಾಣೆಯಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ್ದು ಹುಣಸೂರು ಡಿವೈಎಸ್ಪಿ ಮಹೇಶ್, ಬೈಲಕುಪ್ಪೆ ಇನ್ಸ್ಪೆಕ್ಟರ್ ಪ್ರಕಾಶ್ ಮಾರ್ಗದರ್ಶನದಲ್ಲಿ ಬೈಲಕುಪ್ಪೆ ಠಾಣಾಧಿಕಾರಿ
(ಮೊದಲ ಪುಟದಿಂದ) ಅವರು ಕುಶಾಲನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಈಗಾಗಲೇ ಕೊಡಗು ಜಿಲ್ಲೆಯಲ್ಲಿ ಗಾಂಜಾ ಮತ್ತಿತರ ಮಾದಕ ವಸ್ತುಗಳನ್ನು ಮಾರಾಟ ಮತ್ತು ದಂಧೆಯಲ್ಲಿ ತೊಡಗಿರುವ ನೂರಕ್ಕೂ ಅಧಿಕ ಮಂದಿಯನ್ನು ಬಂಧಿಸಿ ಕ್ರಮ ಕೈಗೊಳ್ಳಲಾಗಿದೆ. ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಜಿಲ್ಲೆಯ ಎಲ್ಲೆಡೆ ಯಶಸ್ವಿ ಕಾರ್ಯಾಚರಣೆ ನಡೆದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಪೊಲೀಸ್ ಮಹಾ ನಿರೀಕ್ಷಕರು ಇಂತಹ ಚಟುವಟಿಕೆಗಳಿಗೆ ಶಾಶ್ವತ ಕಡಿವಾಣ ಹಾಕಲಾಗುವುದು ಎಂದರು.
ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗಳ ಸಮನ್ವಯತೆಯೊಂದಿಗೆ ಕಾರ್ಯಾಚರಣೆ ನಡೆಸಿದಲ್ಲಿ ಕಾನೂನು ಬಾಹಿರ ಚಟುವಟಿಕೆಗಳನ್ನು ಆದಷ್ಟು ಶೀಘ್ರದಲ್ಲಿ ಕೊನೆಗಾಣಿಸಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕಳೆದ ಒಂದು ತಿಂಗಳಿನಿAದ ತಾನು ಜಿಲ್ಲೆಗೆ ಎರಡನೇ ಬಾರಿ ಭೇಟಿ ನೀಡುತ್ತಿದ್ದು ಕುಶಾಲನಗರ ಸೇರಿದಂತೆ ಜಿಲ್ಲೆಯ ಎಲ್ಲೆಡೆ ಕಾನೂನು ಸುವ್ಯವಸ್ಥೆಯ ಕಾರ್ಯವೈಖರಿ ಬಗ್ಗೆ ಜಿಲ್ಲೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುತ್ತಿದೆ ಎಂದರು.
ಈ ಸಂದರ್ಭ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಡಿವೈಎಸ್ಪಿ ಆರ್.ವಿ. ಗಂಗಾಧರಪ್ಪ, ಪೊಲೀಸ್ ವೃತ್ತ ನಿರೀಕ್ಷಕ ಮಹೇಶ್, ಪಟ್ಟಣ ಠಾಣಾಧಿಕಾರಿ ಚಂದ್ರಶೇಖರ್, ಅಪರಾಧ ವಿಭಾಗದ ಗೀತಾ ಮತ್ತಿತರರು ಇದ್ದರು.