ಸುಂಟಿಕೊಪ್ಪ, ಆ. ೮: ಕೊಡಗು ಜಿಲ್ಲಾ ಶಿಕ್ಷಣ ಫೌಂಡೇಶನ್ ವತಿಯಿಂದ ಗರಗಂದೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಆರೋಗ್ಯ ಆರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆರೋಗ್ಯ ಕಾರ್ಯಕರ್ತೆ ಗ್ರೀಷ್ಮ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಯು ಸಂಪೂರ್ಣವಾಗಿ ಆರೋಗ್ಯ ವಂತರಾಗಿ ಇರಬೇಕಾದರೆ, ವೈಯಕ್ತಿಕ ಸ್ವಚ್ಛತೆಯನ್ನು ಕಾಯ್ದುಕೊಳ್ಳುವುದರಿಂದ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಲಿದೆ. ನಾವು ನಿತ್ಯ ಜೀವನದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವುದರಿಂದ ಹೆಚ್ಚು ದಿನಗಳ ಕಾಲ ಉತ್ತಮ ಆರೋಗ್ಯವಂತರಾಗಿ ಜೀವಿಸಲು ಸಾಧ್ಯವಾಗಲಿದೆ ಎಂದರು. ವೈಯಕ್ತಿಕ ಮುನ್ನೆಚ್ಚರಿಕ ಕ್ರಮಗಳ ಬಗ್ಗೆ ಕಿವಿಮಾತು ಹೇಳಿದರು. ಸಿ.ಆರ್.ಪಿ. ಬಿಪಿನ್ ಮಾತನಾಡಿ, ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯವಂತ ರಾಗಿರಬೇಕಾದರೆ ಆರೋಗ್ಯಕ್ಕೆ ಸಂಪೂರ್ಣ ಆಹಾರ ಅತ್ಯವಶ್ಯಕವಾಗಿದೆ. ಆದುದ್ದರಿಂದ ದೈನಂದಿನ ಆಹಾರ ಸೇವನೆಯಲ್ಲಿ ಪೌಷ್ಟಿಕ ಆಹಾರವನ್ನೇ ಸೇವೆನೆ ಮಾಡುವುದ್ದರಿಂದ ಉತ್ತಮ ಆರೋಗ್ಯವನ್ನು ಕಾಯ್ದುಕೊಳ್ಳ ಬಹುದೆಂದರು. ಸಮಾರಂಭದ ವೇದಿಕೆಯಲ್ಲಿ ಸಿ.ಹೆಚ್.ಓ. ರಫೀನಾ, ಪ್ರೇರಣಾ ಕಾರ್ಯಕ್ರಮ ಜಿಲ್ಲಾ ಸಂಯೋಜಕ ಶಿವಕುಮಾರ್, ಮಾದಾಪುರ ಕ್ಲಸ್ಟರ್ ಸಿ.ಆರ್.ಪಿ. ಬಿಪಿನ್, ಆಶಾ ಕಾರ್ಯಕರ್ತೆ ಚಿತ್ರ, ಪ್ರೇಮ ಮತ್ತಿತರರು ಇದ್ದರು. ಶಾಲಾ ಮುಖ್ಯ ಶಿಕ್ಷಕಿ ಸ್ವಾಗತಿಸಿ, ಶಿಕ್ಷಕಿ ಶಶಿರೇಖಾ ವಂದಿಸಿದರು.