ಶನಿವಾರಸಂತೆ: ಸಮೀಪದ ಬೆಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಮ್ಮನೆ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಾಮಾಜಿಕ ಅರಣ್ಯೀಕರಣ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ಕೇಂದ್ರದ ಆವರಣದಲ್ಲಿ, ರಸ್ತೆ ಬದಿ ಹಾಗೂ ಕೆರೆ ಏರಿಯ ಮೇಲೆ ಗಿಡಗಳನ್ನು ನಾಟಿ ಮಾಡಿ ಅರಣ್ಯೀಕರಗೊಳಿಸಲಾಯಿತು. ಈ ಸಂದರ್ಭ ಶ್ರೀ ಧರ್ಮಸ್ಥಳ ಸ್ವಸಹಾಯ ಸಂಘದ ಸದಸ್ಯರಿಗೆ ವಿವಿಧ ಜಾತಿಯ ಗಿಡಗಳನ್ನು ವಿತರಣೆ ಮಾಡಿ ಪರಿಸರ ಜಾಗೃತಿ ಮೂಡಿಸಲಾಯಿತು. ಯೋಜನೆಯ ಕೊಡ್ಲಿಪೇಟೆ ವಲಯ ಮೇಲ್ವಿಚಾರಕ ಕೇಶವಪ್ರಸನ್ನ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಂಜುನಾಥ್, ಕೃಷಿ ಮೇಲ್ವಿಚಾರಕ ರಾಜಣ್ಣ, ಸೇವಾಪ್ರತಿನಿಧಿಗಳಾದ ಸುಧಾ, ಶಾರದಮ್ಮ, ಸ್ವಸಹಾಯ ಸಂಘದ ಸದಸ್ಯರು, ಗ್ರಾಮ ಮುಖಂಡರು ಹಾಜರಿದ್ದರು.ಸೋಮವಾರಪೇಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶಾಂತಳ್ಳಿ ವಲಯದ ವತಿಯಿಂದ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ ದೊಡ್ಡತೋಳೂರಿನಲ್ಲಿ ನಡೆಯಿತು.
ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡತೋಳೂರು ಗ್ರಾಮದ ಹಳೆ ಕೆರೆಯ ಅಂಗಳದಲ್ಲಿ ಸಂಸ್ಥೆಯ ಯೋಜನಾಧಿಕಾರಿ ರೋಹಿತ್ ಅವರು ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ಎ. ನವೀನ್, ಉಪಾಧ್ಯಕ್ಷೆ ಭವಾನಿ ಮಂಜುನಾಥ್, ಪಿಡಿಓ ಮಂಜುಳಾ, ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎ.ಜೆ. ಕೃಷ್ಣಪ್ಪ, ದೊಡ್ಡತೋಳೂರು ಗ್ರಾಮದ ಅಧ್ಯಕ್ಷ ಡಿ.ಕೆ. ವಿರೂಪಾಕ್ಷ, ಪ್ರಮುಖರಾದ ಟಿ.ಜೆ. ದೊಡ್ಡಯ್ಯ, ವಿಪತ್ತು ನಿರ್ವಹಣಾ ತಂಡದ ಸಂಯೋಜಕ ಗಣೇಶ್ ಮತ್ತು ಸ್ವಯಂ ಸೇವಕರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಸೋಮವಾರಪೇಟೆ: ಮಾದಾಪುರದ ಗರಗಂದೂರು ಮೊರಾರ್ಜಿ ದೇಸಾಯಿ ವಿಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರಪೇಟೆ ವಲಯ ಅರಣ್ಯಾಧಿಕಾರಿ ಕಚೇರಿ, ಜಿಲ್ಲಾ ರಾಷ್ಟಿçÃಯ ಹಸಿರು ಪಡೆ ಇಕೋ ಕ್ಲಬ್, ಸೋಮವಾರಪೇಟೆ ಲಯನ್ಸ್ ಕ್ಲಬ್ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌ನ ಜಿಲ್ಲಾ ಸಮಿತಿ ವತಿಯಿಂದ ‘ನನ್ನ ಗಿಡ ನನ್ನ ಹೆಮ್ಮೆ' ಯೋಜನೆಯಡಿ ವನ ಮಹೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ, ರಾಷ್ಟಿçÃಯ ಹಸಿರು ಪಡೆಯ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ. ಪ್ರೇಮಕುಮಾರ್ ಮಾತನಾಡಿ, ಪ್ರತಿಯೊಬ್ಬರು ಗಿಡ ನೆಟ್ಟು ಬೆಳೆಸಿ ಪರಿಸರ ಕಾಪಾಡುವ ಮೂಲಕ ಮುಂದಿನ ಪೀಳಿಗೆಯ ಉತ್ತಮ ಜೀವನ ನಿರ್ವಹಣೆಗೆ ನಾಂದಿ ಹಾಡಬೇಕು ಎಂದರು.
ವಲಯ ಅರಣ್ಯಾಧಿಕಾರಿ ಹೆಚ್.ಪಿ. ಚೇತನ್ ಮಾತನಾಡಿ, ರಾಜ್ಯದಲ್ಲಿ ಹಸಿರು ಪ್ರದೇಶವನ್ನು ವೃದ್ಧಿಸುವ ದಿಸೆಯಲ್ಲಿ ಹಮ್ಮಿಕೊಂಡಿರುವ ವೃಕ್ಷ ಕೋಟಿ ಅಭಿಯಾನದಡಿ ರಾಜ್ಯಾದ್ಯಂತ ಈ ವರ್ಷ ೫ ಕೋಟಿ ಗಿಡಗಳನ್ನು ನೆಟ್ಟು ಬೆಳೆಸುವ ಸಂಕಲ್ಪ ಮಾಡಲಾಗಿದ್ದು, ಸೋಮವಾರಪೇಟೆ ಅರಣ್ಯ ವಲಯದಲ್ಲಿ ೧೫ ಸಾವಿರ ಸಸಿಗಳನ್ನು ನೆಡುವ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು. ಸೋಮವಾರಪೇಟೆ ಲಯನ್ಸ್ ಕ್ಲಬ್ ಅಧ್ಯಕ್ಷ ಎ.ಎಸ್. ಮಹೇಶ್ ಮಾತನಾಡಿ, ವಿದ್ಯಾರ್ಥಿಗಳು ಪರಿಸರ ಮಾತೆ ಸಾಲುಮರದ ತಿಮ್ಮಕ್ಕ ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ತಮ್ಮ ಪರಿಸರದಲ್ಲಿ ಗಿಡನೆಟ್ಟು ಬೆಳೆಸಲು ಪಣ ತೊಡಬೇಕು ಎಂದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಎನ್. ಮಹೇಂದ್ರ ವಹಿಸಿದ್ದರು. ಲಯನ್ಸ್ ಕ್ಲಬ್‌ನ ವಲಯಾಧ್ಯಕ್ಷ ಸಿ.ಕೆ. ರೋಹಿತ್, ಡಿ.ಆರ್.ಎಫ್.ಓ. ವೈ.ಕೆ. ಜಗದೀಶ್, ಗ್ರಾ.ಪಂ. ಅಧ್ಯಕ್ಷ ಡಿ.ಡಿ. ಪದ್ಮನಾಭ, ಸದಸ್ಯ ರಮೇಶ್, ಪಿಡಿಓ ಪೂರ್ಣಿಮ, ವನ ಪಾಲಕರಾದ ಬಿ.ಎ. ಭರಮಣ್ಣ, ಲೋಕೇಶ್, ಸ್ಥಳೀಯರಾದ ಪಾಸುರ ಅಯ್ಯಪ್ಪ, ಉಪನ್ಯಾಸಕರಾದ ನೀಲಜಾ, ಕೆ.ಪಿ. ಪಾಪಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.