ವೀರಾಜಪೇಟೆ, ಆ. ೮: ವೀರಾಜಪೇಟೆ ತಾಲೂಕಿನ ಮಗ್ಗುಲ ಗ್ರಾಮದ ಕುಪ್ಪಚ್ಚಿರ ದಿ. ಭೀಮಯ್ಯ ಮತ್ತು ಕವಿತ ಭೀಮಯ್ಯ ಅವರ ಪುತ್ರ ಕುಪ್ಪಚ್ಚಿರ ಭರತ್ ಅವರಿಗೆ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ೫೭ನೇ ಘಟಿಕೋತ್ಸವದಲ್ಲಿ ಎಂ.ಎಸ್ಸಿ. (ಕೃಷಿ) ಪದವಿಯೊಂದಿಗೆ ಮೂರು ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಯಿತು.

ಕೃಷಿ ವಿಶ್ವವಿದ್ಯಾನಿಲಯದ ರೇಷ್ಮೆ ಕೃಷಿ ಸ್ನಾತಕೋತ್ತರ ವಿಭಾಗದಲ್ಲಿ ಅತೀ ಹೆಚ್ಚು ಅಂಕ ಗಳಿಸಿ, "ಃio-mಚಿಟಿಚಿgemeಟಿಣ oಜಿ ಡಿooಣ-ಞಟಿoಣ ಟಿemಚಿಣoಜe iಟಿ muಟbeಡಿಡಿಥಿ ( _ಒoಡಿus ಚಿಟbಚಿ_ ಐ.) ಚಿಟಿಜ iಣs imಠಿಚಿಛಿಣ oಟಿ siಟಞತಿoಡಿm ಡಿeಚಿಡಿiಟಿg" ಎಂಬ ವಿಷಯದ ಕುರಿತಾಗಿ ಸಂಶೋಧನಾ ಪ್ರಬಂಧವನ್ನು ರಚಿಸಿರುವುದಕ್ಕೆ ಭರತ್ ಅವರಿಗೆ ಕರ್ನಾಟಕದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾನಿಲಯದ ಕುಲಾಧಿಪತಿ ಥಾವರ್ ಚಂದ್ ಗೆಹ್ಲೋಟ್ ಪ್ರಶಸ್ತಿ ಪತ್ರ ಮತ್ತು ಮೂರು ಸ್ವರ್ಣ ಪದಕಗಳನ್ನು ಪ್ರದಾನ ಮಾಡಿದ್ದಾರೆ.

ಈ ಸಂದರ್ಭ ನವದೆಹಲಿಯ ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ಮಹಾ ನಿರ್ದೇಶಕ ಡಾ. ಹಿಮಾಂಶು ಪಾಠಕ್, ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ, ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಎಸ್.ವಿ. ಸುರೇಶ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.