ಮಡಿಕೇರಿ, ಆ. ೮: ಟಿ.ಶೆಟ್ಟಿಗೇರಿಯ ಮಾಯಣಮಾಡ ಮಂದಯ್ಯ ಸ್ಮಾರಕ ಪ್ರೌಢಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿ ಮೈಸೂರಿಗೆ ವರ್ಗಾವಣೆಯಾದ ಕನ್ನಡ ಶಿಕ್ಷಕ ಚಂದನ್ ಕುಮಾರ್ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.

ಈ ಸಂದರ್ಭ ಶಾಲಾ ಶಿಕ್ಷಕ ವೃಂದ, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.