ಸೋಮವಾರಪೇಟೆ, ಆ. ೮: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಇಲ್ಲಿನ ಮಹಿಳಾ ಸಮಾಜ ನಡೆದ ಕವಯತ್ರಿ ಜಲಜಾ ಶೇಖರ್ ರಚಿತ ‘ನೆಲ ಮುಗಿಲು’ ಕವನ ಸಂಕಲನ ಬಿಡುಗಡೆ ಸಮಾರಂಭದಲ್ಲಿ ಜಾನಪದ ವಿದ್ವಾಂಸ ಡಾ. ಮೋಹನ್ ಪಾಳೇಗಾರ್ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಅವರುಗಳನ್ನು ಸನ್ಮಾನಿಸಲಾಯಿತು.
ಈ ಸಂದರ್ಭ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್, ತಾಲೂಕು ಅಧ್ಯಕ್ಷ ಎಸ್.ಡಿ. ವಿಜೇತ್, ಮಾಜಿ ಅಧ್ಯಕ್ಷ ಜೆ.ಸಿ. ಶೇಖರ್, ಆರನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆ ಜಲ ಕಾಳಪ್ಪ, ಜಲಜಾ ಶೇಖರ್, ಜಿಲ್ಲಾ ಸಾಹಿತ್ಯ ಪರಿಷತ್ನ ಗೌರವ ಕಾರ್ಯದರ್ಶಿ ರೇವತಿ ರಮೇಶ್, ತಾಲೂಕು ಕಾರ್ಯದರ್ಶಿಗಳಾದ ಜ್ಯೋತಿ ಅರುಣ್, ಎ.ಪಿ. ವೀರರಾಜ್, ಮಂಜುಳಾ ಇನ್ನಿತರರು ಇದ್ದರು.