ರಾಹುಲ್ ‘ಫ್ಲೆöÊಯಿಂಗ್ ಕಿಸ್'ಗೆ ಸ್ಮೃತಿ ಇರಾನಿ ಆಕ್ಷೇಪ

ನವದೆಹಲಿ, ಆ. ೯: ಲೋಕಸಭೆಯಲ್ಲಿ ಕಾಂಗ್ರೆಸ್ ರಾಹುಲ್ ಗಾಂಧಿ ಅವರ ‘ಫ್ಲೆöÊಯಿಂಗ್ ಕಿಸ್'ಗೆ ಕೇಂದ್ರ ಸಚಿವೆ ಹಾಗೂ ಬಿಜೆಪಿ ಸಂಸದೆ ಸ್ಮೃತಿ ಇರಾನಿ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಇಂತಹ ಅಸಭ್ಯತೆಯನ್ನು ಸಂಸತ್ತು ಹಿಂದೆAದೂ ಕಂಡಿರಲಿಲ್ಲ ಎಂದು ಹೇಳಿದ್ದಾರೆ. ಅವಿಶ್ವಾಸ ನಿರ್ಣಯದ ಕುರಿತು ರಾಹುಲ್ ಗಾಂಧಿ ಭಾಷಣ ಮುಕ್ತಾಯಗೊಳಿಸಿದ ನಂತರ ಮಾತನಾಡಿದ ಸ್ಮೃತಿ ಇರಾನಿ ಅವರು, ವರ್ತನೆಯನ್ನು ನಾನು ಆಕ್ಷೇಪಿಸುತ್ತೇನೆ. ಹೊರಡುವ ಮುನ್ನ ಅಸಭ್ಯತೆಯನ್ನು ಪ್ರದರ್ಶಿಸಿದರು. ಸ್ತಿçÃದ್ವೇಷಿ ಪುರುಷನೊಬ್ಬನಿಂದ ಮಾತ್ರ ಮಹಿಳೆಯರು ಹಾಜರಿರುವ ಸದನಕ್ಕೆ ಫ್ಲೆöÊಯಿಂಗ್ ಕಿಸ್ ಮಾಡಲು ಸಾಧ್ಯ ಎಂದು ಸ್ಮೃತಿ ಇರಾನಿ ಹೇಳಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಸಂಸದೆಯೊಬ್ಬರ ಕಡೆಗೆ ನೋಡುತ್ತಾ ಈ ವರ್ತನೆಗೆ ಏನು ಹೇಳಬೇಕು ಎಂದು ಪ್ರಶ್ನಿಸಿದರು.

ಟೊಮೆಟೋ ಹಾರ ಧರಿಸಿ ಬಂದ ಸಂಸದ!

ನವದೆಹಲಿ, ಆ. ೯: ಬೆಲೆ ಏರಿಕೆ ವಿರುದ್ಧ ಪ್ರತಿಭಟನಾರ್ಥವಾಗಿ ಅಮ್ ಆದ್ಮಿ ಪಕ್ಷದ ಸಂಸದ ಸುಶೀಲ್ ಕುಮಾರ್ ಗುಪ್ತಾ ಅವರು ರಾಜ್ಯಸಭೆಗೆ ಟೊಮೆಟೋ ಹಾಗೂ ಶುಂಠಿಯ ಹಾರವನ್ನು ಧರಿಸಿ ಬಂದರು. ಆದರೆ ಅವರ ಈ ವರ್ತನೆಗೆ ಸಭಾಧ್ಯಕ್ಷ ಜಗದೀಪ್ ಧನಕರ್ ಅವರು ತೀವ್ರ ಆಕ್ಷೇಪ ವ್ಯಕ್ತಡಿಸಿದರು. ರಾಜ್ಯಸಭೆಯಲ್ಲಿ ಕೆಲವು ಅಧಿಕೃತ ದಾಖಲೆಗಳನ್ನು ಮಂಡಿಸುವಾಗ ಗುಪ್ತಾ ಅವರು ಟೊಮೆಟೊ ಹಾಗೂ ಶುಂಠಿಯ ಹಾರ ಧರಿಸಿ ಸದನಕ್ಕೆ ಪ್ರವೇಶಿಸಿದರು.

ಕೃಷಿ ಇಲಾಖೆ ಕಚೇರಿಗೆ ಸಿಐಡಿ ತಂಡ ಭೇಟಿ

ಮಂಡ್ಯ, ಆ. ೯: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರ ವಿರುದ್ಧ ರಾಜ್ಯಪಾಲರಿಗೆ ನೀಡಿದ್ದಾರೆ ಎನ್ನಲಾದ ದೂರಿನ ಸಂಬAಧ ತನಿಖೆ ನಡೆಸಲು ಸಿಐಡಿ ಅಧಿಕಾರಿಗಳ ತಂಡ ನಗರದ ಕೃಷಿ ಇಲಾಖೆ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಸಿಐಡಿ ಐಜಿ ಪ್ರವೀಣ್ ಮಧುಕರ್ ಪವಾರ್ ನೇತೃತ್ವದ ತಂಡ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಕೃಷಿ ಜಂಟಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಜಂಟಿ ನಿರ್ದೇಶಕರೊಂದಿಗೆ ಕೆಲಕಾಲ ಮಾತುಕತೆ ನಡೆಸಿತು. ಪತ್ರ ಬರೆದಿದ್ದಾರೆ ಎನ್ನಲಾದ ಎಲ್ಲಾ ೭ ಸಹಾಯಕ ನಿರ್ದೇಶಕ ಜೊತೆ ಸಿಐಡಿ ಅಧಿಕಾರಿಗಳು ಪ್ರತ್ಯೇಕವಾಗಿ ಮಾತನಾಡಿದ್ದಾರೆ.

‘ಕೇರಳಂ' ಮರುನಾಮಕರಣಕ್ಕೆ ನಿಲುವಳಿ

ತಿರುವನಂತಪುರ, ಆ. ೯: ರಾಜ್ಯವನ್ನು ‘ಕೇರಳಂ' ಎಂದು ಅಧಿಕೃತವಾಗಿ ಮರುನಾಮಕರಣ ಮಾಡಲು ಕೇಂದ್ರ ಸರ್ಕಾರವನ್ನು ಕೋರಿ ಮಂಡಿಸಲಾದ ನಿಲುವಳಿಗೆ ಕೇರಳ ವಿಧಾನಸಭೆ ಸರ್ವಾನುಮತದ ಒಪ್ಪಿಗೆ ನೀಡಿದೆ. ಸಂವಿಧಾನದ ಎಂಟನೇ ಪರಿಚ್ಛೇದ ಸೇರಿ ಎಲ್ಲಾ ಭಾಷೆಗಳಲ್ಲಿ ರಾಜ್ಯದ ಹೆಸರನ್ನು ‘ಕೇರಳಂ' ಎಂದು ಬದಲಾಯಿಸಬೇಕು ಎನ್ನುವ ನಿಲುವಳಿಯನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಮಂಡಿಸಿದರು.

ಮಣಿಪುರದಲ್ಲಿ ‘ಭಾರತ ಮಾತೆ'ಯ ಕೊಲೆ-ರಾಹುಲ್

ನವದೆಹಲಿ, ಆ. ೯: ಲೋಕಸಭೆಯಲ್ಲಿ ವಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯದ ಮೇಲೆ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಜೆಪಿಯ ರಾಜಕಾರಣದಿಂದ ಮಣಿಪುರದಲ್ಲಿ ‘ಭಾರತ ಮಾತೆ'ಯ ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಸಂಸತ್ತಿನಲ್ಲಿ ಮಾತನಾಡಿದ ರಾಹುಲ್, ಹಿಂಸಾಚಾರ ಪೀಡಿತ ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡದಿರುವುದನ್ನು ಟೀಕಿಸಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ನಾನು ಮಣಿಪುರಕ್ಕೆ ಭೇಟಿ ನೀಡಿದ್ದೇನೆ. ಆದರೆ ನಮ್ಮ ಪ್ರಧಾನಿ ಇದುವರೆಗೆ ಅಲ್ಲಿಗೆ ಹೋಗಿಲ್ಲ. ಅವರು ಮಣಿಪುರವನ್ನು ದೇಶದ ಭಾಗವೆಂದು ಪರಿಗಣಿಸಿಲ್ಲ. ಬಿಜೆಪಿ ಸರ್ಕಾರ ಮಣಿಪುರವನ್ನು ಇಬ್ಭಾಗ ಮಾಡಿದೆ. ಮಣಿಪುರವನ್ನು ಒಡೆಯಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

‘ಪಕ್ಷಕ್ಕಾಗಿ ದುಡಿದವರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ’

ಬೆಂಗಳೂರು, ಆ. ೯: ನಿಗಮ ಮಂಡಳಿಗಳಲ್ಲಿ ಅಧ್ಯಕ್ಷ, ಸದಸ್ಯ ಸ್ಥಾನಗಳಿಗೆ ಯರ‍್ಯಾರನ್ನೋ ನೇಮಕ ಮಾಡುವುದಿಲ್ಲ. ಯಾವ ನಾಯಕರು ಪಕ್ಷಕ್ಕಾಗಿ ದುಡಿದಿದ್ದಾರೋ ಅವರಿಗೆ ಮೊದಲ ಆದ್ಯತೆ ನೀಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಪಕ್ಷದ ರಾಜ್ಯ ಉಸ್ತುವಾರಿ ರಂದೀಪ್ ಸುರ್ಜೇವಾಲಾ ಅವರು ಕೂಡಾ ಇದೇ ಸೂಚನೆ ನೀಡಿದ್ದಾರೆ. ಬೂತ್ ಮಟ್ಟದಲ್ಲಿ ಎಷ್ಟು ಮತಗಳನ್ನು ಪಕ್ಷಕ್ಕೆ ತಂದಿದ್ದಾರೋ ಅಂತಹ ನಾಯಕರಿಗೆ ಮೊದಲು ಪ್ರಾಶಸ್ತö್ಯ ನೀಡುವಂತೆ ಸಲಹೆ ನೀಡಿದ್ದಾರೆ ಎಂದರು.

ಇಮ್ರಾನ್ ಖಾನ್ ಚುನಾವಣೆಗೆ ಸ್ಪರ್ಧಿಸದಂತೆ ನಿರ್ಬಂಧ

ಇಸ್ಲಾಮಾಬಾದ್, ಆ. ೯: ಭ್ರಷ್ಟಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಜೈಲು ಸೇರಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಐದು ವರ್ಷಗಳವರೆಗೆ ಚುನಾವಣೆಗಳಲ್ಲಿ ಸ್ಪರ್ಧಿಸದಂತೆ ಪಾಕಿಸ್ತಾನ ಚುನಾವಣಾ ಆಯೋಗ ನಿರ್ಬಂಧಿಸಿದೆ. ಪ್ರಧಾನಿಯಾಗಿದ್ದಾಗ ವಿದೇಶಿ ಗಣ್ಯರಿಂದ ಉಡು ಗೊರೆಯಾಗಿ ಪಡೆದಿದ್ದ ದುಬಾರಿ ವಸ್ತುಗಳನ್ನು ಸರ್ಕಾರಿ ಅಧಿಕಾರಿಗೆ ಮಾರಾಟ ಮಾಡಿದ್ದ ಆರೋಪ ಇಮ್ರಾಖ್ ಖಾನ್ ವಿರುದ್ಧ ಕೇಳಿಬಂದಿತ್ತು. ವಿಚಾರಣೆ ನಡೆಸಿದ್ದ ಇಸ್ಲಾಮಾಬಾದ್‌ನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು, ಅವರಿಗೆ ಮೂರು ವರ್ಷ ಜೈಲು ಶಿಕ್ಷ ವಿಧಿಸಿದೆ. ಇಮ್ರಾನ್ ಖಾನ್ ಅವರನ್ನು ಐದು ವರ್ಷಗಳವರೆಗೆ ಚುನಾವಣೆಗಳಲ್ಲಿ ಸ್ಪರ್ಧಿಸದಂತೆ ಅನರ್ಹ ಗೊಳಿಸಲಾಗಿದೆ ಎಂದು ಚುನಾವಣಾ ಆಯೋಗ ಹೇಳಿಕೆ ಬಿಡುಗಡೆ ಮಾಡಿದೆ.

ಮಹಾತ್ಮಾಗಾಂಧಿ ಮರಿಮೊಮ್ಮಗನ ಬಂಧನ - ಬಿಡುಗಡೆ

ಮುಂಬೈ, ಆ. ೯: ಭಾರತ ಬಿಟ್ಟು ತೊಲಗಿ ಚಳುವಳಿ ಸ್ಮರಣಾರ್ಥ ಇಲ್ಲಿನ ಕ್ರಾಂತಿ ಮೈದಾನದಲ್ಲಿ ಅಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಮಹಾತ್ಮಾಗಾಂಧಿ ಅವರ ಮರಿಮೊಮ್ಮಗ ತುಷಾರ್ ಗಾಂಧಿ ಅವರನ್ನು ಸಾಂತಾ ಕ್ರೂಸ್ ಪೊಲೀಸರು ಬುಧವಾರ ಬಂಧಿಸಿ ಬಿಡುಗಡೆ ಮಾಡಿದ್ದಾರೆ. ಈ ಕುರಿತು ತುಷಾರ್ ಗಾಂಧಿ ಅವರೇ ಮಾಹಿತಿ ಹಂಚಿಕೊAಡಿದ್ದಾರೆ. ಈ ಭ್ರಷ್ಟ ಸರ್ಕಾರ ನಮ್ಮಶಾಂತಿ ಮತ್ತು ಅಹಿಂಸೆಗೆ ಬೆದರುತ್ತಿರುವುದೇಕೆ? ಎನ್ನುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಚಾಟಿ ಬೀಸಿರುವ ತುಷಾರ್ ಗಾಂಧಿ ಅವರ ಬಂಧನಕ್ಕೆ ಕಾರಣ ಏನೆಂಬುದು ತಿಳಿದು ಬಂದಿಲ್ಲ.

ಶಾಸಕ ರೇವಣ್ಣ ಆಪ್ತನ ಬರ್ಬರ ಹತ್ಯೆ

ಹಾಸನ, ಆ. ೯: ಗ್ರಾನೈಟ್ ವ್ಯಾಪಾರಿ, ಗುತ್ತಿಗೆದಾರ ಹಾಗೂ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರ ನಿಕಟವರ್ತಿ ಕೃಷ್ಣೇಗೌಡ (೫೫) ಎಂಬವರನ್ನು ದುಷ್ಕರ್ಮಿಗಳು ಹಾಸನದ ಕೈಗಾರಿಕಾ ಅಭಿವೃದ್ಧಿ ಕೇಂದ್ರದ ಬಳಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಪ್ರತ್ಯಕ್ಷ ಮಾಹಿತಿಯ ಪ್ರಕಾರ, ಮಧ್ಯಾಹ್ನ ೧೨.೪೫ ರ ಸುಮಾರಿಗೆ ಘಟನೆ ಸಂಭವಿಸಿದೆ. ಇನ್ನೋವಾ ಕಾರನ್ನು ನಿಲ್ಲಿಸಿ ಗ್ರಾನೈಟ್ ಘಟಕಕ್ಕೆ ಹೋಗುತ್ತಿದ್ದಾಗ ಐವರ ತಂಡ ಇನ್ನೋವಾ ಕಾರಿನಲ್ಲಿ ಬಂದು ಹಲ್ಲೆ ನಡೆಸಿದೆ.

ಸ್ಪಂದನ ಅಂತ್ಯಕ್ರಿಯೆ

ಬೆAಗಳೂರು, ಆ. ೯: ಬ್ಯಾಂಕಾಕ್‌ನಲ್ಲಿ ನಿಧನರಾದ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಪಾರ್ಥಿವ ಶರೀರದ ಅಂತ್ಯಸAಸ್ಕಾರ ಬೆಂಗಳೂರಿನ ಶ್ರೀರಾಂಪುರದಲ್ಲಿರುವ ಹರಿಶ್ಚಂದ್ರ ಘಾಟ್‌ನಲ್ಲಿ ನೆರವೇರಿತು. ಪತಿ ವಿಜಯ ರಾಘವೇಂದ್ರ ಮತ್ತು ಮಗ ಶೌರ್ಯ ಅಂತಿಮ ವಿಧಿ ವಿಧಾನ ನೆರವೇರಿಸಿದರು. ಗಣ್ಯರು ಅಂತಿಮ ದರ್ಶನ ಪಡೆದು ಕುಟುಂಬಕ್ಕೆ ಸಾಂತ್ವನ ಹೇಳಿದರು.

ಡಿಜಿಟಲ್ ವೈಯಕ್ತಿಕ ಮಾಹಿತಿ ಸಂರಕ್ಷಣಾ ಮಸೂದೆ ಅಂಗೀಕಾರ

ನವದೆಹಲಿ, ಆ. ೯: ವಿರೋಧ ಪಕ್ಷಗಳ ಸದಸ್ಯರು ಸಭಾತ್ಯಾಗದ ನಡುವೆಯೇ ರಾಜ್ಯಸಭೆಯಲ್ಲೂ ಡಿಜಿಟಲ್ ವೈಯಕ್ತಿಕ ಮಾಹಿತಿ ಸಂರಕ್ಷಣಾ ಮಸೂದೆ ೨೦೨೩ ಅನ್ನು ಧ್ವನಿ ಮತದ ಮೂಲಕ ಬುಧವಾರ ಅಂಗೀಕರಿಸಲಾಗಿದೆ. ಲೋಕಸಭೆಯಲ್ಲಿ ಅಂಗೀಕಾರವಾಗಿದ್ದ ಮಸೂದೆಯನ್ನು ಇಂದು ರಾಜ್ಯಸಭೆಯಲ್ಲಿ ಕೇಂದ್ರ ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರು ಮಂಡಿಸಿದರು. ದತ್ತಾಂಶ ಸಂರಕ್ಷಣೆ, ಡೇಟಾ ಹಂಚಿಕೆ ಮತ್ತು ಡೇಟಾ ಸಂಗ್ರಹಕ್ಕೆ ಸಂಬAಧಿಸಿದAತೆ ಕಠಿಣ ನಿಯಮಗಳನ್ನು ಈ ವಿಧೇಯಕದಲ್ಲಿ ರೂಪಿಸಲಾಗಿದ್ದು, ನಿಯಮ ಉಲ್ಲಂಘಿಸುವ ಘಟಕಗಳಿಗೆ ಕನಿಷ್ಟ ೫೦ ಕೋಟಿಯಿಂದ ಗರಿಷ್ಠ ೨೫೦ ಕೋಟಿವರೆಗೆ ದಂಡ ವಿಧಿಸಲು ಮಸೂದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.