ಮಡಿಕೇರಿ, ಆ. ೯: ಕ್ವಿಟ್ ಇಂಡಿಯಾ ಚಳವಳಿ ಭಾರತದ ಸ್ವಾತಂತ್ರö್ಯಕ್ಕೆ ಭದ್ರ ಬುನಾದಿ ಹಾಕಿದ ಜನಾಂದೋಲನ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.

ಕೊಡಗು ಜಿಲ್ಲಾ ಕಾಂಗ್ರೆಸ್ ಆಯೋಜಿಸಿದ ೮೧ನೇ ಕ್ವಿಟ್ ಇಂಡಿಯಾ ಚಳವಳಿಯ ವಾರ್ಷಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆ ಸಂದರ್ಭದಲ್ಲಿ ಸ್ವಾತಂತ್ರö್ಯ ಹೋರಾಟಗಾರರಾದ ಮಲ್ಲೇಂಗಡ ಚಂಗಪ್ಪನವರು ಮಡಿಕೇರಿ ಕೋಟೆಯಲ್ಲಿ ಯೂನಿಯನ್ ಜಾಕ್ ಧ್ವಜವನ್ನು ಕೆಳಗಿಳಿಸಿ ಭಾರತದ ತ್ರಿವರ್ಣ ಧ್ವಜ ಹಾರಿಸಿ ಬಂಧನಕ್ಕೆ ಒಳಗಾಗಿದನ್ನು ಸ್ಮರಿಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ ಮಾತನಾಡಿ, ಮಹಾತ್ಮ ಗಾಂಧಿಯವರ ಮಾಡು ಇಲ್ಲವೇ ಮಡಿ ಎಂಬ ಕರೆಗೆ ಇಡೀ ದೇಶವೇ ಕೈಜೋಡಿಸಿ ಸ್ವಾತಂತ್ರ‍್ಯ ಚಳವಳಿಯಲ್ಲಿ ಧುಮುಕಿ ಯಶಸ್ಸು ಕಂಡಿತು ಎಂದು ಹೇಳಿದರು.

ಹಿರಿಯ ಮುಖಂಡರಾದ ಟಿ.ಪಿ. ರಮೇಶ್ ಮಾತನಾಡಿ, ಮಹಾತ್ಮ ಗಾಂಧಿ, ಜವಹರಲಾಲ್ ನೆಹರು ಸೇರಿದಂತೆ ಕಾಂಗ್ರೆಸ್ ನಾಯಕರು ಕ್ವಿಟ್ ಇಂಡಿಯಾ ಚಳವಳಿಗೆ ಕರೆ ನೀಡಿ ಬಂಧನಕ್ಕೆ ಒಳಗಾದ ನಂತರ ಇತರ ಕಾಂಗ್ರೆಸ್ ಮುಖಂಡರು ಹಾಗೂ ಸದಸ್ಯರು ದೇಶದ ರೈತರು, ಕಾರ್ಮಿಕರು ಸೇರಿದಂತೆ ಭಾರತೀಯ ನಾಗರಿಕರ ನೆರವಿನಿಂದ ಚಳವಳಿ ಫಲಪ್ರದವಾದ ಬಗ್ಗೆ ವಿವರಣೆ ನೀಡಿದರು.

ರಾಜೀವ್ ಗಾಂಧಿ ಪಂಚಾಯತ್‌ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಪ್ರಾಸ್ತಾವಿಕವಾಗಿ ಮಾತನಾಡಿದರು.

ಡಿಸಿಸಿ ಉಪಾಧ್ಯಕ್ಷ ಕೊಕ್ಕಲೇರ ಸುಜು ತಿಮ್ಮಯ್ಯ, ಅಬ್ದುಲ್ ರೆಹಮಾನ್, ಡಿಸಿಸಿ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮದ್ ಕ್ವಿಟ್ ಇಂಡಿಯಾ ಚಳವಳಿಯ ಇತಿಹಾಸವನ್ನು ವಿವರಿಸಿದರು.

ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯ ಅಬ್ರಾರ್, ಡಿ.ಸಿ.ಸಿ ಗೌರವ ಕಾರ್ಯದರ್ಶಿ ವಿ.ಪಿ. ಸುರೇಶ್, ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಯಲ್ಲಪ್ಪ ವೇದಿಕೆಯಲ್ಲಿ ಉಪಸ್ಥಿತರಿದ್ದರು.