ಸೋಮವಾರಪೇಟೆ, ಆ. ೧೦ : ಇಲ್ಲಿನ ಪವರ್ ಹೌಸ್ ರಸ್ತೆಯ ನಿವಾಸಿ ಪಿ. ಪ್ರಧಾನ್ ಅವರು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ೫೭ನೇ ಘಟಿಕೋತ್ಸವದಲ್ಲಿ ಪ್ರಥಮ ಶ್ರೇಯಾಂಕನಾಗಿ ತೆರ್ಗಡೆ ಹೊಂದಿ ಎರಡು ಚಿನ್ನದ ಪದಕಗಳಿಗೆ ಭಾಜನರಾಗಿದ್ದಾರೆ.
ವಿಶ್ವವಿದ್ಯಾಲಯದಲ್ಲಿ ನಡೆದ ಘಟಿಕೋತ್ಸವದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಅವರುಗಳು ಪ್ರಶಸ್ತಿ ಪತ್ರ ಹಾಗೂ ಎರಡು ಚಿನ್ನದ ಪದಕಗಳನ್ನು ಪ್ರದಾನ ಮಾಡಿದರು. ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ಮಹಾ ನಿರ್ದೇಶಕ ಡಾ. ಹಿಮಾನ್ಷು ಪಾಠಕ್, ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಎಸ್. ವಿ. ಸುರೇಶ್ ಇನ್ನಿತರರು ಉಪಸ್ಥಿತರಿದ್ದರು. ಪ್ರಧಾನ್ ಅವರು ಪವರ್ ಹೌಸ್ ರಸ್ತೆ ನಿವಾಸಿ ದಿ. ಪ್ರಶಾಂತ್ ಮತ್ತು ಮೇನಕ ದಂಪತಿ ಪುತ್ರ.