ಚೆಯ್ಯಂಡಾಣೆ: ಸ್ಥಳೀಯ ನರಿಯಂದಡ ಗ್ರಾಮ ಪಂಚಾಯಿತಿಯ ೨ನೇ ಅವಧಿಯಲ್ಲಿ ಅಧ್ಯಕ್ಷ - ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಅಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದರಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಪೆಮ್ಮಂಡ ಕೌಶಿ ಕಾವೇರಮ್ಮ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಮೀಸಲು ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಕೋಡಿರ ವಿನೋದ್ ನಾಣಯ್ಯ ಮಾತ್ರ ನಾಮಪತ್ರ ಸಲ್ಲಿಸಿದರು.
ಬೇರೆ ಯಾವುದೇ ನಾಮಪತ್ರ ಸಲ್ಲಿಕೆಯಾಗದ ಕಾರಣ ಅಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆ ನಡೆಯಿತು. ಚುನಾವಣಾಧಿಕಾರಿಯಾಗಿ ಶಿಕ್ಷಣಾಧಿಕಾರಿ ಅಕ್ಷರ ದಾಸೋಹದ ಹೇಮಂತ್ ಕಾರ್ಯನಿರ್ವಹಿಸಿದರು.