ಮಡಿಕೇರಿ, ಆ. ೧೦: ವೀರಾಜಪೇಟೆ ರೋಟರಿ ಪ್ರಾಥಮಿಕ ಮತ್ತು ರೋಟರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ನಾಯಕತ್ವ ಪದಗ್ರಹಣ ಸಮಾರಂಭ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೀರಾಜಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಪ್ರಕಾಶ್ ಅವರು ವಹಿಸಿದ್ದರು.
ಅತಿಥಿಗಳಾಗಿ ವೀರಾಜಪೇಟೆ ಕ್ಲಸ್ಟರ್ನ ಸಿಆರ್ಪಿ ವೆಂಕಟೇಶ್ ವಿ.ಟಿ. ಅವರು ಆಗಮಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿಗಳು ನಾಯಕತ್ವ ಪಡೆದ ವಿದ್ಯಾರ್ಥಿಗಳನ್ನುದ್ದೇಶಿಸಿ ಪ್ರೋತ್ಸಾಹದ ನುಡಿಗಳನ್ನಾಡಿದರು. ಸಮಾರಂಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಶಾಲಾ ಸಹ ಶಿಕ್ಷಕರು ವಿದ್ಯಾರ್ಥಿಗಳು ಸಿಬ್ಬಂದಿ ವರ್ಗದವರು ಹಾಜರಿದ್ದರು.