ಸಿದ್ದಾಪುರ, ಆ. ೧೦: ಮಣಿಪುರ ಗಲಭೆಯನ್ನು ಖಂಡಿಸಿ ಸಿದ್ದಾಪುರದ ವಲಯ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ವರ್ಗದ ಘಟಕದ ವತಿಯಿಂದ ಸಿದ್ದಾಪುರದ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಗಾರರು ಬಿ.ಜೆ.ಪಿ. ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ನಂತರ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಕಾಂಗ್ರೆಸ್ ಮುಖಂಡರಾದ ಎಂ.ಎಸ್. ವೆಂಕಟೇಶ್ ಹಾಗೂ ಪಿ.ವಿ. ಜಾನ್ಸನ್ ಮಾತನಾಡಿದರು. ಪ್ರತಿಭಟನೆಯ ನೇತೃತ್ವವನ್ನು ವಲಯ ಪರಿಶಿಷ್ಟ ವರ್ಗದ ಅಧ್ಯಕ್ಷ ರವಿ ವಹಿಸಿದ್ದರು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳಾದ ಅಬ್ದುಲ್ ಸುಕೂರ್, ವಿ.ಕೆ. ಬಶೀರ್, ಜಾಫರ್ ಆಲಿ, ಮಾಲ್ದಾರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಾಲತಿ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರುಗಳು ವಲಯ ಕಾಂಗ್ರೆಸ್ ಅಧ್ಯಕ್ಷ ಎಸ್.ಬಿ. ಪ್ರತೀಶ್, ಬಿಜೋಯ್ ಇನ್ನಿತರರು ಹಾಜರಿದ್ದರು.