ಸುಂಟಿಕೊಪ್ಪ, ಆ. ೧೦ : ಇಲ್ಲಿಗೆ ಸಮೀಪದ ಕಂಬಿಬಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಪ್ಪು ತೋಡು ತೋಟಕ್ಕೆ ಕಾಡಾನೆಗಳ ದಾಳಿಯಿಂದ ಅಪಾರ ಬೆಳೆ ನಷ್ಟವಾಗಿದೆ.
ಕಳೆದ ಒಂದು ತಿಂಗಳಿAದ ಈ ಭಾಗದಲ್ಲಿ ಕಾಡಾನೆಗಳು ತೋಟಗಳಲ್ಲಿ ಬೀಡುಬಿಟ್ಟಿದ್ದು, ಕಾಫಿ, ಕರಿಮೆಣಸು ಬಾಳೆ ತೋಟಗಳನ್ನು ಧ್ವ್ವಂಸಗೊಳಿಸಿ ಭಾರಿ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ ಎಂದು ತೋಟದ ಮಾಲೀಕ ಮಂಜುನಾಥ ರೈ ತಮ್ಮ ಅಳಲು ತೋಡಿಕೊಂಡಿದ್ದಾರೆ.
ಕAಬಿಬಾಣೆ ಗ್ರಾಮ ಪಂಚಾಯಿತಿಯ ಉಪ್ಪುತೋಡು ಗ್ರಾಮದ ಮಂಜುನಾಥ ರೈ ಎಂಬುವವರಿಗೆ ಸೇರಿದ ತೋಟಕ್ಕೆ ನುಗ್ಗಿದ ಕಾಡಾನೆಗಳ ಹಿಂಡು ಬಾಳೆ, ತೆಂಗು, ಸೀಮೆ ಹುಲ್ಲು ಕಾಫಿ ಗಿಡಗಳನ್ನು ಧ್ವಂಸಗೊಳಿಸಿದ್ದು ಅಂದಾಜು ಸುಮಾರು ರೂ.೧ ಲಕ್ಷದÀಷ್ಟು ನಷ್ಟ ಸಂಭವಿಸಿದೆ ಎಂದಿದ್ದಾರೆ. ಅರಣ್ಯ ಇಲಾಖೆಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಕಳೆದ ೧ ತಿಂಗಳಿAದ ಕಾಡಾನೆಗಳು ಈ ಭಾಗದ ತೋಟಗಳಲ್ಲಿ ಬೀಡುಬಿಟ್ಟಿದ್ದು, ಕಾಫಿ ಗಿಡಗಳನ್ನು ನಾಶಪಡಿಸಿ ನಂತರ ಗದ್ದೆಗೆ ಲಗ್ಗೆಯಿಟ್ಟು ಬೆಳೆಗಳನ್ನು ಹಾಳು ಮಾಡುತ್ತಿವೆ.