ಶನಿವಾರಸಂತೆ, ಆ. ೧೦ : ಸಮೀಪದ ಕೊಡ್ಲಿಪೇಟೆಯಲ್ಲಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ತಾ. ೧೩ ರಂದು ಭಾನುವಾರ ಸಂಜೆ ೬ ಗಂಟೆಗೆ ಅಖಂಡ ಭಾರತ ಸಂಕಲ್ಪ ದಿನದ ಪ್ರಯುಕ್ತ ಬೃಹತ್ ಪಂಜಿನ ಮೆರವಣಿಗೆಯನ್ನು ಏರ್ಪಡಿಸಲಾಗಿದೆ.

ಪಟ್ಟಣದ ಮುನ್ಸಿಪಾಲಿಟಿ ಶ್ರೀ ಗಣಪತಿ ದೇವಸ್ಥಾನದಿಂದ ಮೆರವಣಿಗೆಗೆ ಚಾಲನೆ ನೀಡಲಾಗುವುದು. ನಂತರ ಶ್ರೀ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವರಳ್ಳಿಯ ನಿವೃತ್ತ ಸೈನಿಕ ಜಗದೀಶ್ ವಹಿಸುತ್ತಾರೆ. ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಜಿ.ವಿ.ರಾಜೇಶ್ ದಿಕ್ಸೂಚಿ ಭಾಷಣ ಮಾಡುತ್ತಾರೆ ಎಂದು ವೇದಿಕೆ ಪ್ರಕಟಣೆ ತಿಳಿಸಿದೆ.