ಮಡಿಕೇರಿ, ಆ. ೧೧: ಕಾಂತೂರು - ಮೂರ್ನಾಡು ಗ್ರಾಮ ಪಂಚಾಯಿತಿಯ ೨ನೇ ಅವಧಿಗೆ ಅಧ್ಯಕ್ಷರಾಗಿ ಬಿ.ಎಸ್. ಕುಶನ್ ರೈ ಚುನಾಯಿತರಾದರೆ, ಉಪಾಧ್ಯಕ್ಷೆಯಾಗಿ ಬಿ.ಎಸ್. ರೇಖಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ಬಿ.ಎಸ್. ಕುಶನ್ ರೈ ಮತ್ತು ಎಂ.ಡಿ. ಅಯ್ಯಪ್ಪ (ಮೂಡೇರ ಅಶೋಕ್) ನಾಮಪತ್ರ ಸಲ್ಲಿಸಿದ್ದರು. ಇಬ್ಬರು ಬಿಜೆಪಿ ಬೆಂಬಲಿತರಾಗಿದ್ದು, ಅಧ್ಯಕ್ಷಗಾದಿಗೆ ಪೈಪೋಟಿ ಎದುರಾಗಿತ್ತು. ನಂತರ ನಡೆದ ಮತದಾನ ಪ್ರಕ್ರಿಯೆಯಲ್ಲಿ ಬಿ.ಎಸ್. ಕುಶನ್ ರೈ ೧೪ ಮತಗಳನ್ನು ಪಡೆದರೆ, ಎಂ.ಡಿ. ಅಯ್ಯಪ್ಪ ೭ ಮತಗಳನ್ನು ಪಡೆದು ಸೋಲು ಅನುಭವಿಸಿದರು.

ಉಪಾಧ್ಯಕ್ಷ ಸ್ಥಾನಕ್ಕೆ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಬಿ.ಎಸ್. ರೇಖಾ ಅವಿರೋಧ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಎಂ.ಜಿ. ರಘುರಾಮ್ ಕಾರ್ಯನಿರ್ವಹಿಸಿದರು.