ನಾಪೋಕ್ಲು, ಆ. ೧೧: ನೆಲಜಿ ಗ್ರಾಮದ ಅಂಬಲ ಮಹಿಳಾ ಸಮಾಜದ ವತಿಯಿಂದ ಕಕ್ಕಡ ಹಬ್ಬದ ಪ್ರಯುಕ್ತ ವಿಶೇಷ ಪೂಜೆ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಂಬಲ ಮಹಿಳಾ ಸಮಾಜದ ಅಧ್ಯಕ್ಷೆ ಅಪ್ಪುಮಣಿಯಂಡ ಡೇಝಿ ಸೋಮಣ್ಣ ಹೇಳಿದರು.
ಪಟ್ಟಣದಲ್ಲಿ ಬುಧವಾರ ಆಯೋಜಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ತಾ. ೧೨ ರಂದು (ಇಂದು) ಬೆಳಿಗ್ಗೆ ೧೧.೩೦ ಗಂಟೆಗೆ ನೆಲಜಿ ಶ್ರೀ ಇಗ್ಗುತ್ತಪ್ಪ ದೇವಸ್ಥಾನದಲ್ಲಿ ಕಕ್ಕಡ ಹಬ್ಬದ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮ ಹಾಗೂ ಅಪರಾಹ್ನ ೧.೩೦ಕ್ಕೆ ನೆಲಜಿ ದವಸ ಭಂಡಾರದ ಕಟ್ಟಡದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಗ್ರಾಮದ ಕಾಫಿ ಬೆಳೆಗಾರರಾದ ಮಂಡೀರ ಸರೋಜಾ ದೇವಯ್ಯ ಹಾಗೂ ವೀರಾಜಪೇಟೆಯ ಮಹಿಳಾ ವಿಭಾಗದ ಅಧ್ಯಕ್ಷೆ ಮನೆಯಪಂಡ ಕಾಂತಿ ಸತೀಶ್ ಪಾಲ್ಗೊಳ್ಳಲಿದ್ದಾರೆ ಎಂದು ಡೇಝಿ ಸೋಮಣ್ಣ ಹೇಳಿದರು.
ಕಾರ್ಯಕ್ರಮದಲ್ಲಿ ವೀರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ವಿಧಾನಪರಿಷತ್ ಸದಸ್ಯ ಮಂಡೆಪAಡ ಸುಜಾ ಕುಶಾಲಪ್ಪ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಐಮುಡಿಯಂಡ ರಾಣಿ ಮಾಚಯ್ಯ ಹಾಗೂ ಮಡಿಕೇರಿ ಆಕಾಶವಾಣಿಯ ನಿವೃತ್ತ ಉದ್ಘೋಷಕಿ ಕೂಪದಿರ ಶಾರದಾ ನಂಜಪ್ಪ ಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಲಹಾ ಸಮಿತಿ ಅಧ್ಯಕ್ಷೆ ಮಣವಟ್ಟೀರ ಕಮಲ ಬೆಳ್ಳಿಯಪ್ಪ, ನಿರ್ದೇಶಕರಾದ ಮಣವಟ್ಟೀರ ಸುಶೀಲ ಚಂಗಪ್ಪ, ಮಣವಟ್ಟೀರ ಜಾನ್ಸಿ ತಿಮ್ಮಯ್ಯ ಇದ್ದರು.