ಸೋಮವಾರಪೇಟೆ, ಆ. ೧೧: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹುಟ್ಟುಹಬ್ಬದ ಅಂಗವಾಗಿ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಗೆ ವಿಶೇಷ ಉಪಾಹಾರ ವ್ಯವಸ್ಥೆ ಮಾಡಿದ್ದರು.

ಕಾಂಗ್ರೆಸ್ ಕಾರ್ಯಕರ್ತರಾದ ಟಿ.ಸಿ. ಸತೀಶ್, ಪಿ.ಪಿ. ರವಿ, ಸುಚೇತನ್, ಜಿ.ಆರ್. ಸುಹಾಸ್, ವಿನಯ್ ಅವರುಗಳು ವಿದ್ಯಾರ್ಥಿಗಳಿಗೆ ವಿಶೇಷ ಉಪಾಹಾರದ ವ್ಯವಸ್ಥೆ ಕಲ್ಪಿಸಿದ್ದರು.