ಕರಿಕೆ, ಆ. ೧೨: ಇಲ್ಲಿನ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯ ಸಾಮಾನ್ಯ ಸಭೆ ಪಂಚಾಯಿತಿ ಅಧ್ಯಕ್ಷೆ ಕುದುಪಜೆ ಕಲ್ಪನಾ ಜಗದೀಶ್ ಅವರ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.

ಮೊದಲ ಆಡಳಿತ ಅವಧಿಯ ಕೊನೆಯ ಸಾಮಾನ್ಯ ಸಭೆ ಇದಾಗಿದ್ದು, ಸಭೆಯಲ್ಲಿ ಪಂಚಾಯಿತಿ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿ ಹಾಗೂ ಮಳೆ ಹಾನಿಯಿಂದ ಉಂಟಾದ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಉಪಾಧ್ಯಕ್ಷ ಎನ್. ಬಾಲಚಂದ್ರ ನಾಯರ್, ಸದಸ್ಯರಾದ ನಾರಾಯಣ, ಪುರುಷೋತ್ತಮ, ದೀಪಿಕಾ ಸೇರಿದಂತೆ ಇತರರಿದ್ದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಣಪತಿ ಸ್ವಾಗತಿಸಿದರು.