ವೀರಾಜಪೇಟೆ, ಆ. ೧೨: ವೀರಾಜಪೇಟೆ ನಗರ ಪೊಲೀಸ್ ಠಾಣೆ ಸರಹದ್ದಿನಲ್ಲಿ ನಿಷೇಧಿತ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ವೀರಾಜಪೇಟೆ ಪೊಲೀಸ್ ತಂಡ ಯಶಸ್ವಿಯಾಗಿದೆ.
ಪೆರುಂಬಾಡಿ ಚೆಕ್‌ಪೋಸ್ಟ್ ಬಳಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಿ, ಬೈಲುಕೊಪ್ಪ ನಿವಾಸಿಗಳಾದ ಬಿ.ಕೆ. ದಿನೇಶ್(೨೬), ಚಂದ್ರ(೨೪) ಮತ್ತು ಪೊನ್ನಂಪೇಟೆ ಬೇಗೂರು ನಿವಾಸಿಯಾದ ಎ.ಎ. ರಶೀದ್ (೩೪) ಎಂಬವರನ್ನು ವಶಪಡಿಸಿ ಕೊಂಡು ೪ ಕೆ.ಜಿ ೩೭೦ ಗ್ರಾಂ ಗಾಂಜಾ ಮಾದಕ ವಸ್ತುವಿನೊಂದಿಗೆ ದಸ್ತಗಿರಿ ಮಾಡಿ ಕ್ರಮ ಕೈಗೊಳ್ಳಲಾಗಿದೆ.
ವೀರಾಜಪೇಟೆ ವೃತ್ತ ನಿರೀಕ್ಷಕರಾದ ಬಿ.ಎಸ್. ಶಿವರುದ್ರಪ್ಪ, ಮತ್ತು ವೀರಾಜಪೇಟೆ ನಗರ ಪೊಲೀಸ್ ಠಾಣೆ ಪಿಎಸ್‌ಐ ರವೀಂದ್ರ ಹಾಗೂ ಸಿಬ್ಬಂದಿಗಳ ವಿಶೇಷ ತಂಡವನ್ನು ರಚಿಸಿ ತನಿಖೆ ಕೈಗೊಂಡಿದ್ದರು.