ಮಡಿಕೇರಿ, ಆ. ೧೨: ಸೋಮವಾರಪೇಟೆ ಪೊಲೀಸ್ ಠಾಣೆ ಸರಹದ್ದಿನ ಕೂತಿ ಗ್ರಾಮದಲ್ಲಿ ಅಕ್ರಮವಾಗಿ ಕಳ್ಳಬಟ್ಟಿ ಸಾರಾಯಿಯನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ.
ತಾ.೧೧ರಂದು ಕೂತಿ ಗ್ರಾಮದಲ್ಲಿ ಅಕ್ರಮವಾಗಿ ಕಳ್ಳಬಟ್ಟಿ ಸಾರಾಯಿಯನ್ನು ಕಾಯಿಸಿ ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಿ, ಕೂತಿ ಗ್ರಾಮದ ನಿವಾಸಿ ತಮ್ಮಯ್ಯ ಡಿ.ಡಿ. (೫೮) ಎಂಬವರನ್ನು ೧೭ ಲೀ. ಪುಳಿಗಂಜಿಯೊAದಿಗೆ ದಸ್ತಗಿರಿ ಮಾಡಿ ಕ್ರಮ ಕೈಗೊಳ್ಳಲಾಗಿದೆ. ಸೋಮವಾರಪೇಟೆ ಉಪವಿಭಾಗದ ಡಿ.ಎಸ್.ಪಿ. ಗಂಗಾಧರಪ್ಪ ಆರ್.ವಿ. ಹಾಗೂ ಸೋಮವಾರಪೇಟೆ ಠಾಣೆಯ ಪಿ.ಐ. ರಾಮಂಚದ್ರ ನಾಯಕ್ ಹಾಗೂ ಸಿಬ್ಬಂದಿಗಳು ತಂಡವನ್ನು ರಚಿಸಿ ತನಿಖೆ ಕೈಗೊಂಡು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.