ಕೂಡಿಗೆ, ಆ. ೧೩: ಇಲ್ಲಿಗೆ ಸಮೀಪದ ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಿವೆ ಶ್ರೀ ರಾಮಲಿಂಗೇಶ್ವರ ದೇವಾಲಯ ಮುಂಭಾಗದಲ್ಲಿ ಹರಿಯುವ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ತೂಗು ಸೇತುವೆಯನ್ನು ಜಿಲ್ಲಾ ಮಟ್ಟದ ಅಧಿಕಾರಿ ವರ್ಗದವರು ಪರಿಶೀಲಿಸಿದರು.
ಜೂನ್ ೨೪ರಂದು ‘ಅಪಾಯದಂಚಿನಲ್ಲಿರುವ ಕಣಿವೆಯ ತೂಗುಸೇತುವೆ’ ಎಂಬ ವರದಿಯು ‘ಶಕ್ತಿ’ಯಲ್ಲಿ ಪ್ರಕಟಗೊಂಡಿತು.
ವರದಿಗೆ ಸಂಬAಧಿಸಿದAತೆಯೂ ಹಾಗೂ ಮಳೆಯಿಂದಾಗಿ ಜಿಲ್ಲೆಯಲ್ಲಿ ಆದ ಹಾನಿಯ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಜಿಲ್ಲೆಯ ಅಧಿಕಾರಿಗಳೊಂದಿಗೆ ವೀಡಿಯೋ ಸಂವಾದ ಸಂದರ್ಭ ಚರ್ಚಿಸಿದ್ದು, ಕಣಿವೆಯ ತೂಗು ಸೇತುವೆ ಬಗ್ಗೆಯೂ ಚರ್ಚೆಗಳು ನಡೆದಿವೆ.
ಅದರಂತೆ ಜಿಲ್ಲಾಧಿಕಾರಿ ಮನವಿ ಮೇರೆಗೆ ಕಾವೇರಿ ನೀರಾವರಿ ನಿಗಮದ ಹಾರಂಗಿ ಅಣೆಕಟ್ಟೆಯ ನೀರಾವರಿ ಇಲಾಖೆಯ ಮುಖ್ಯ ಅಭಿಯಂತರರು ಕಣಿವೆ ತೂಗುಸೇತುವೆಯ ದುರಸ್ತಿಗೆ ಸಂಬAಧಿಸಿದAತೆ ಪರಿಶೀಲನೆ ನಡೆಸಿದರು.