ಮಡಿಕೇರಿ, ಆ. ೧೩: ನೆಲ್ಲಿಹುದಿಕೇರಿ, ಅಭ್ಯತ್‌ಮಂಗಲ, ಹೊಸ್ಕೇರಿ, ಮರಗೋಡು, ಕಟ್ಟೆಮಾಡು, ಅರೆಕಾಡು, ಗುಹ್ಯ, ಸಿದ್ದಾಪುರ ಪ್ರದೇಶದಲ್ಲಿ ಕಾಡಾನೆಗಳು ಕಂಡು ಬಂದಿದ್ದು ಮುಂಜಾಗ್ರತಾ ಕ್ರಮವಾಗಿ ಆ ಪ್ರದೇಶದ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳಿಗೆ ಸುರಕ್ಷತಾ ದೃಷ್ಟಿಯಿಂದ ತಾ. ೧೪ ರಂದು (ಇಂದು) ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಅರಣ್ಯ ಅಥವಾ ಇನ್ನಿತರೆ ಪ್ರದೇಶದಲ್ಲಿ ಒಂಟಿಯಾಗಿ ಓಡಾಡದಂತೆ ಎಲ್ಲಾ ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಮಾಹಿತಿ ನೀಡಲು ಮುಖ್ಯ ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿಗಳಿಗೆ ಸೂಚಿಸಿದ್ದಾರೆ.