ಸಿದ್ದಾಪುರ, ಆ. ೧೩: ಸಿದ್ದಾಪುರದ ಪಾಲಿಬೆಟ್ಟ ರಸ್ತೆಯಲ್ಲಿ ಯುವಕ ನೋರ್ವನನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪದಡಿಯಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸು ವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಸಿದ್ದಾಪುರದ ಪಾಲಿಬೆಟ್ಟ ರಸ್ತೆ ಬದಿಯಲ್ಲಿ ನೆಲ್ಯಹುದಿಕೇರಿ ನಿವಾಸಿ ಕ್ರಿಸ್ಟಲ್ (೨೬)ಎಂಬಾತನ ಮೃತದೇಹ ಗಾಯದೊಂದಿಗೆ ಸಂಶಯಾಸ್ಪದ ರೀತಿಯಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ಮೃತನ ಪೋಷಕರು ನೀಡಿದ ದೂರಿನ ಮೇರೆಗೆ ತನಿಖೆ ಮುಂದುವರಿಸಿದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಸಿದ್ದಾಪುರ ನಿವಾಸಿ ಗಳಾದ ರಂಜನ್ ಅಲಿಯಾಸ್ ರಂಜು(೩೮), ರವೀಂದ್ರ ಅಲಿಯಾಸ್ ರವಿ(೪೨) ಹಾಗೂ ಪಿರಿಯಾಪಟ್ಟಣ ತಾಲೂಕಿನ ಮುತ್ತೂರು ಗ್ರಾಮದ ನಿವಾಸಿಗಳಾದ ಅನಿಲ್ ಕುಮಾರ್ (೨೪) ಸಚಿನ್ (೨೯) ಎಂದು ಗುರುತಿಸಲಾಗಿದ್ದು, ನಾಲ್ವರು ಸೇರಿ ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಕ್ರಿಸ್ಟಲ್‌ನನ್ನು ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ.
ಕಾರ್ಯಾಚರಣೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಎ.ಎಸ್.ಪಿ. ಸುಂದರ್ ರಾಜ್ ಮಾರ್ಗದರ್ಶನದಲ್ಲಿ ಡಿ.ವೈ.ಎಸ್.ಪಿ. ಜಗದೀಶ್, ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ನೇತೃತ್ವ ದಲ್ಲಿ ನಡೆದ ಕಾರ್ಯಾ ಚರಣೆಯಲ್ಲಿ ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ರಾಘವೇಂದ್ರ, ಎಎಸ್‌ಐ ತಮ್ಮಯ್ಯ ಹಾಗೂ ಸಿಬ್ಬಂದಿಗಳು ಪಾಲ್ಗೊಂ ಡಿದ್ದರು. ಪೊಲೀಸರು ಆರೋಪಿ ರಂಜುಗೆ ಸೇರಿದ ಪಿಕ್‌ಅಪ್ ಜೀಪ್ ಹಾಗೂ ದ್ವಿಚಕ್ರ ವಾಹನವನ್ನು ಮುಟ್ಟು ಗೋಲು ಹಾಕಿಕೊಂಡಿದ್ದಾರೆ.