ಪೊನ್ನಂಪೇಟೆ, ಆ. ೧೩: ಗೋಣಿಕೊಪ್ಪಲು ಕಾವೇರಿ ಪದವಿಪೂರ್ವ ಕಾಲೇಜಿನಲ್ಲಿ ೨೨ ವರ್ಷಗಳ ಸುದೀರ್ಘ ಕರ್ತವ್ಯ ನಿರ್ವಹಿಸಿ ಜುಲೈ ೩೧ ರಂದು ನಿವೃತ್ತರಾದ ಆಡಳಿತಾತ್ಮಕ ಸಿಬ್ಬಂದಿ ಎಂ.ಸಿ. ಕುಮಾರಿ ಅವರಿಗೆ ಕಾವೇರಿ ಕಾಲೇಜು ವತಿಯಿಂದ ಬೀಳ್ಕೊಡುಗೆ ನೀಡಲಾಯಿತು.
ಈ ಸಂದರ್ಭ ಕಾವೇರಿ ಎಜುಕೇಷನ್ ಸೊಸೈಟಿ ಗೌರವ ಕಾರ್ಯದರ್ಶಿ ಕೆ.ಪಿ. ಬೋಪಣ್ಣ, ಪದವಿ ಕಾಲೇಜು ಪ್ರಾಂಶುಪಾಲ ಡಾ. ಎಂ.ಬಿ. ಕಾವೇರಪ್ಪ, ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಎಸ್.ಎಸ್. ಮಾದಯ್ಯ, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.