ವರದಿ : ಚಂದ್ರಮೋಹನ್ ಎಂ.ಎನ್.
ಮೈಸೂರು, ಆ. ೧೩ : ಹಾರಂಗಿ ಜಲಾಶಯದಿಂದ ಜನ ಜಾನುವಾರು ಗಳು ಹಾಗೂ ರೈತಾಪಿ ವರ್ಗಕ್ಕೆ ಅನುಕೂಲ ಕಲ್ಪಿಸುವ ಹಿನ್ನೆಲೆಯಲ್ಲಿ ಭಾನುವಾರದಿಂದಲೇ ಕಟ್ಟು ಪದ್ಧತಿ ಪ್ರಕಾರ ಅಚ್ಚುಕಟ್ಟು ಪ್ರದೇಶದ ಕಾಲುವೆಗಳಿಗೆ ನೀರು ಹರಿಸುವ ಬಗ್ಗೆ ಕಾವೇರಿ ನೀರಾವರಿ ನಿಗಮದ ಹಾರಂಗಿ ಯೋಜನಾ ವೃತ್ತದ ನೀರಾವರಿ ಸಲಹಾ ಸಮಿತಿ ಸಭೆ ನಿರ್ಧರಿಸಿದೆ.
ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂಥರ್ ಗೌಡ ಅವರ ಅಧ್ಯಕ್ಷತೆಯಲ್ಲಿ ಮೈಸೂರಿನ ನೀರಾವರಿ ನಿಗಮದ ಮುಖ್ಯ ಇಂಜಿನಿಯರ್ ಕಛೇರಿಯ ಸಭಾಂಗಣದಲ್ಲಿ ಕೊಡಗು ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರುಗಳು ಹಾಗೂ ಸಲಹಾ ಸಮಿತಿ ಸದಸ್ಯರುಗಳ ಉಪಸ್ಥಿತಿಯಲ್ಲಿ ಚರ್ಚೆ ನಡೆದು ಈ ನಿರ್ಧಾರ ಕೈಗೊಳ್ಳಲಾಗಿದೆ.
ಮುಂಗಾರು ವೈಫಲ್ಯದ ಹಿನ್ನೆಲೆಯಲ್ಲಿ ನೀರಿನ ಅಭಾವ ಉಂಟಾಗಿರುವ ಕಾರಣ ಮಡಿಕೇರಿ, ಅರಕಲಗೂಡು, ಪಿರಿಯಾಪಟ್ಟಣ, ಕೆ.ಆರ್.ನಗರ ಕ್ಷೇತ್ರದ ಶಾಸಕರುಗಳು ಹಾರಂಗಿ ಯೋಜನಾ ವೃತ್ತದ ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಪರಿಸ್ಥಿತಿಯ ಅವಲೋಕನ ನಂತರ ರೈತರು, ಜನ ಜಾನುವಾರುಗಳಿಗೆ ನೀರು ಹರಿಸುವ ಸಂಬAಧ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಡಾ.ಮಂಥÀರ್‌ಗೌಡ ತಿಳಿಸಿದ್ದಾರೆ.
ಸಭೆಯಲ್ಲಿ ಕೊಡಗು ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರುಗಳಾದ ಬೋಸರಾಜು, ಎಚ್.ಸಿ.ಮಹದೇವಪ್ಪ, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಶಾಸಕರುಗಳಾದ ಅರಕಲಗೂಡು ಕ್ಷೇತ್ರದ ಎ.ಮಂಜು, ಕೆ ಆರ್ ನಗರ ಕ್ಷೇತ್ರದ ರವಿಶಂಕರ್, ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ, ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ, ಕೊಡಗು ಜಿಲ್ಲಾ
೩ಏಳನೇ ಪುಟಕ್ಕೆ
(ಮೊದಲ ಪುಟದಿಂದ) ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಕೊಡಗು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್‌ನೇಗಿ, ಕಾವೇರಿ ನೀರಾವರಿ ನಿಗಮದ ಮುಖ್ಯ ಇಂಜಿನಿಯರ್ ಆರ್.ಎಲ್.ವೆಂಕಟೇಶ್, ಸೂಪರಿಂಟೆAಡೆAಟ್ ಇಂಜಿನಿಯರ್ ಕೆ.ಕೆ.ರಘುಪತಿ, ಕಾರ್ಯ ಪಾಲಕ ಅಭಿಯಂತರ ಐ.ಕೆ.ಪುಟ್ಟಸ್ವಾಮಿ ಸೇರಿದಂತೆ ಹಾಸನ, ಮೈಸೂರು, ಕೊಡಗು ಜಿಲ್ಲೆಯ ನೀರಾವರಿ ನಿಗಮ, ಕೃಷಿ ಇಲಾಖೆ ಹಿರಿಯ ಅಧಿಕಾರಿಗಳು ಇದ್ದರು.
ಈ ಸಂದರ್ಭದಲ್ಲಿ ‘ಶಕ್ತಿ’ಯೊಂದಿಗೆ ಮಾಹಿತಿ ನೀಡಿದ ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂಥರ್‌ಗೌಡ ಹಾರಂಗಿ ಯೋಜನಾ ವೃತ್ತದ ಅಚ್ಚುಕಟ್ಟು ವ್ಯಾಪ್ತಿಯ ಕಾಲುವೆಗಳಿಗೆ ನೀರು ಹರಿಸುವ ಮೂಲಕ ರೈತರ ಅರೆ ನೀರಾವರಿ ಬೆಳೆಗೆ ಕಾಲುವೆ ನೀರನ್ನು ಬಳಸಿಕೊಳ್ಳಬಹುದು. ಮಳೆ ಅಭಾವದಿಂದ ನೀರಿನ ಕೊರತೆ ಎದುರಿಸುತ್ತಿರುವ ಅಚ್ಚುಕಟ್ಟು ವ್ಯಾಪ್ತಿಯ ರೈತಾಪಿ ವರ್ಗ ಇದರ ಸದುಪಯೋಗಪಡಿಸಿಕೊಳ್ಳುವಂತೆ ಅವರು ಕೋರಿದ್ದಾರೆ. ಜಲಾಶಯದ ನೀರಿನ ಮಟ್ಟ ಕಾಯ್ದುಕೊಂಡು ಕಾಲುವೆಗೆ ಮತ್ತು ನದಿಗೆ ನೀರು ಹರಿಸುವ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭ ‘ಶಕ್ತಿ’ಗೆ ಪ್ರತಿಕ್ರಿಯೆ ನೀಡಿದ ಯೋಜನಾ ವೃತ್ತದ ಮುಖ್ಯ ಇಂಜಿನಿಯರ್ ವೆಂಕಟೇಶ್ ಆಗಸ್ಟ್ ತಿಂಗಳ ಅಂತ್ಯದಲ್ಲಿ ಕೊಡಗು ಸೇರಿದಂತೆ ಎಲ್ಲೆಡೆ ಹೆಚ್ಚಿನ ಪ್ರಮಾಣದ ಮಳೆ ಸುರಿಯುವ ಬಗ್ಗೆ ಹವಾಮಾನ ಮುನ್ಸೂಚನೆ ಇದೆ ಎಂದು ತಿಳಿಸಿದ್ದಾರೆ.