ಮಡಿಕೇರಿ, ಆ. ೧೪: ಕೊಡಗು ಪತ್ರಕರ್ತರ ಸಂಘ, ಕೊಡಗು ಜಿಲ್ಲಾ ಛಾಯಾಗ್ರಹಕರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಮಂಜಿನ ನಗರಿ ಛಾಯಾಗ್ರಾಹಕ ಸಂಘದ ಆಶ್ರಯದಲ್ಲಿ ವಿಶ್ವ ಛಾಯಾಗ್ರಾಹಕರ ದಿನಾಚರಣೆ ಯನ್ನು ತಾ.೧೯ ರಂದು ಮಡಿಕೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಗುಡ್ಡೆಹೊಸೂರಿನ ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಂಗಣ ದಲ್ಲಿ ನಡೆದ ಸಂಘದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಸ್.ಎ. ಮುರಳೀಧರ್, ಜಿಲ್ಲಾ ಛಾಯಾಗ್ರಾಹಕ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ವಸಂತ್ ಅವರ ಸಮ್ಮುಖದಲ್ಲಿ ಈ ಸಭೆ ನಡೆಸಲಾಯಿತು. ಕೊಡಗು ಪತ್ರಕರ್ತರ ಸಂಘದ ಉಪಾಧ್ಯಕ್ಷ ಜಿ.ವಿ.ರವಿ ಕುಮಾರ್, ಛಾಯಾಗ್ರಾಹಕ ಸಂಘದ ಪ್ರಧಾನ ಕಾರ್ಯದರ್ಶಿ ಸೋಲಮಾನ್ ಡೇವಿಡ್, ದಕ್ಷಿಣ ಕೊಡಗು ಛಾಯಾಗ್ರಾಹಕ ಸಂಘದ ಅಧ್ಯಕ್ಷ ಡಾಡು ಜೋಸೆಫ್, ಪುಷ್ಪ ಗಿರಿ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಎಸ್. ಸುಬ್ರಮಣಿ, ಕಾವೇರಿ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ರಾದ ವಿ.ಜಿ.ಕುಮಾರ್, ಮಂಜಿನ ನಗರಿ ಛಾಯಾಗ್ರಾಹಕ ಸಂಘದ ಅಧ್ಯಕ್ಷ ಪ್ರದೀಪ್, ಜಿಲ್ಲಾ ಛಾಯಾಗ್ರಾಹಕ ರ ಸಂಘ ದ ಉಪಾಧ್ಯಕ್ಷ ರಾದ ಜರ್ನಾಧನ, ಮಾಜೀ ಅಧ್ಯಕ್ಷ ಸುರೇಶ್ ಮಾವುಟ್ಕರ್, ಕೊಡಗು ಪತ್ರಕರ್ತರ ಸಂಘದ ಸಹ ಕಾರ್ಯದರ್ಶಿ ಪ್ರಸಾದ್ ಸಂಪಿಗೆಕಟ್ಟೆ, ಖಜಾಂಜಿ ಟಿ.ಕೆ. ಸಂತೋಷ್, ಸಂಘಟನಾ ಕಾರ್ಯದರ್ಶಿ ಸುರೇಶ್ ಬಿಳಿಗೇರಿ, ಕೊಡಗು ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ನಿಧಿ ಕಾರ್ಯದರ್ಶಿ ಅರುಣ್ ಕೂರ್ಗ್ ಕುಮಾರ್, ಸದಸ್ಯರಾದ ವಿಶ್ವ ಗುಡ್ಡೆಮನೆ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.