ವಿಶ್ವಕರ್ಮ ಯೋಜನೆ ಘೋಷಿಸಿದ ಪ್ರಧಾನಿ

ನವದೆಹಲಿ, ಆ. ೧೫: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ರೂ. ೭೧೫ ಸಾವಿರ ಕೋಟಿ ವೆಚ್ಚದ ‘ವಿಶ್ವಕರ್ಮ ಯೋಜನೆ'ಯನ್ನು ಘೋಷಿಸಿದರು. ಈ ಯೋಜನೆಯ ಕಾರ್ಯಕ್ರಮಗಳು ಹಣದುಬ್ಬರದ ಸಂದರ್ಭದಲ್ಲಿ ಜನರ ಮೇಲಿನ ಹೊರೆ ತಗ್ಗಿಸಲು ನೆರವಾಗಲಿದೆ ಎಂದು ತಿಳಿಸಿದರು. ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರೊö್ಯÃತ್ಸವ ಸಮಾರಂಭದಲ್ಲಿ ಧ್ವಜಾರೋಹಣ ಮಾಡಿ ಅವರು ಮಾತನಾಡಿದರು. ೧೫ ಸಾವಿರ ಮಹಿಳಾ ಸ್ವಸಹಾಯ ಗುಂಪುಗಳಿಗೆ ಢ್ರೋನ್ ನಿರ್ವಹಣೆ, ದುರಸ್ತಿ ತರಬೇತಿ ನೀಡುವ ಯೋಜನೆ ಹಾಗೂ ನಗರಗಳಲ್ಲಿನ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗಾಗಿ ವಸತಿ ಯೋಜನೆ ಜಾರಿಗೊಳಿಸುವ ತೀರ್ಮಾನವನ್ನು ಪ್ರಧಾನಿ ಪ್ರಕಟಿಸಿದರು. ವಿಶ್ವಕರ್ಮ ಜಯಂತಿಯAದು ನಾವು ಈ ಸಂಬAಧ ವಿವಿಧ ಯೋಜನೆಗಳನ್ನು ಪ್ರಕಟಿಸಲಿದ್ದೇವೆ. ಈ ಯೋಜನೆಗಳು ಕೌಶಲಯುಕ್ತ, ಸಾಂಪ್ರಾದಾಯಿಕ ಕುಶಲಕರ್ಮಿಗಳಿಗೆ ಮುಖ್ಯವಾಗಿ ಇತರೆ ಹಿಂದುಳಿದ ವರ್ಗಗಳ ಸಮುದಾಯದವರಿಗೆ ನೆರವಾಗಲಿದೆ ಎಂದು ತಿಳಿಸಿದರು. ನೇಯ್ದೆದಾರರು, ಅಕ್ಕಸಾಲಿಗರು, ಕಂಬಾರರು, ಅಗಸರು, ಕ್ಷೌರಿಕರು ಹಾಗೂ ಇಂತಹ ವಿವಿಧ ವರ್ಗದ ಕುಟುಂಬಗಳ ಆರ್ಥಿಕ ಸಬಲೀಕರಣ ವಿಶ್ವಕರ್ಮ ಯೋಜನೆಯ ಉದ್ದೇಶವಾಗಿದೆ. ಈ ಯೋಜನೆಯನ್ನು ಸೆಪ್ಟೆಂಬರ್ ೧೭, ೨೦೨೩ರಂದು ಆರಂಭಿಸಲಾಗುವುದು ಎಂದು ಹೇಳಿದರು.

ಸಮಗ್ರ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ : ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಆ. ೧೫: ಬಲಿಷ್ಠವಾಗಿ ನಿಂತಿರುವ ನಮ್ಮ ದೇಶದ ಸೈನ್ಯ, ದೇಶದ ಸಂಪತ್ತನ್ನು ಹೆಚ್ಚಿಸುತ್ತಿರುವ ಯುವಜನತೆ ಮತ್ತು ದೇಶವು ಹಸಿವಿನಿಂದ ಕಂಗೆಡದAತೆ ನಿರಂತರ ಅನ್ನ ಉತ್ಪಾದಿಸುತ್ತಿರುವ ಅನ್ನಬ್ರಹ್ಮನೆಂದು ಕರೆಯಲಾಗುವ ರೈತರನ್ನು ಸ್ಮರಿಸೋಣ. ಕಾರ್ಮಿಕರು, ವಿಜ್ಞಾನಿಗಳು, ತಂತ್ರಜ್ಞಾನಿಗಳು… ಮುಂತಾದವರನ್ನು ಹುರಿದುಂಬಿಸೋಣ. ಶ್ರದ್ಧೆಯಿಂದ ದುಡಿದು ಸುಭದ್ರ ಬದುಕನ್ನು ಕಟ್ಟಿಕೊಳ್ಳುವ ಮೂಲಕ ಸುಭದ್ರ ಕರ್ನಾಟಕ ಹಾಗೂ ಸುಭದ್ರ ಭಾರತವನ್ನು ನಿರ್ಮಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ ಅವರು, ಸಾವಿರಾರು ಜನರ ತ್ಯಾಗ, ಬಲಿದಾನಗಳ ಫಲವಾಗಿ ಇಂದು ನಾವು ಸ್ವಾತಂತ್ರ‍್ಯದ ಸವಿಯುಣ್ಣುತ್ತಿದ್ದೇವೆ. ಪ್ರಾಣದ ಹಂಗುತೊರೆದು ದಾಸ್ಯದ ಸಂಕೋಲೆಯಿAದ ದೇಶವನ್ನು ಬಿಡುಗಡೆಗೊಳಿಸಲು ಹೋರಾಡಿದ ಎಲ್ಲಾ ಮಹಾನ್ ಚೇತನಗಳಿಗೂ ಗೌರವಪೂರ್ವಕ ನಮನ ಸಲ್ಲಿಸುತ್ತೇನೆ ಎಂದು ಹೇಳಿದರು. ಸ್ವತಂತ್ರ ಭಾರತದಲ್ಲಿ ಜೀವಿಸುತ್ತಿರುವ ನಮಗೆ ಸ್ವಾತಂತ್ರ‍್ಯ ಎಂಬುದು ಎಷ್ಟು ದುಬಾರಿಯಾದ ಸಂಗತಿ ಎಂಬುದು ಅರಿವಿಗೆ ಬರಲೇಬೇಕು. ಇಲ್ಲದಿದ್ದರೆ ನಮ್ಮ ಹಿರಿಯರ ತ್ಯಾಗ ಬಲಿದಾನಗಳಿಗೆ ಅರ್ಥವೇ ಇರುವುದಿಲ್ಲ. ಸ್ವಾತಂತ್ರö್ಯ ಎಂಬುದು ಮನುಷ್ಯರ ಜೀವಕ್ಕಿಂತ ಮಿಗಿಲು ಎಂದು ಸ್ವಾತಂತ್ರ‍್ಯ ಹೋರಾಟಗಾರರು ಭಾವಿಸಿದ್ದರು. ಆದ್ದರಿಂದಲೇ ಎಲ್ಲಾ ಮಹನೀಯರು ತಮ್ಮ ಸರ್ವಸ್ವವನ್ನೂ ತ್ಯಾಗ ಮಾಡಿ ಸ್ವಾತಂತ್ರ‍್ಯ ಚಳವಳಿಯಲ್ಲಿ ಭಾಗವಹಿಸಿದ್ದರು. ಅವರ ತ್ಯಾಗ ಬಲಿದಾನಗಳನ್ನು ದೇಶವು ಶ್ರದ್ಧಾಪೂರ್ವಕವಾಗಿ ಸ್ಮರಿಸಲೇಬೇಕು ಎಂದರು.

ತಮಿಳುನಾಡಿಗೆ ೧೦ ಟಿಎಂಸಿ ಕಾವೇರಿ ನೀರು ಬಿಡುಗಡೆ

ಬೆಂಗಳೂರು, ಆ. ೧೫: ನೆರೆಯ ತಮಿಳುನಾಡಿಗೆ ೧೦ ಟಿಎಂಸಿ ಕಾವೇರಿ ನದಿ ನೀರನ್ನು ಬಿಡಲಾಗುವುದು ಎಂದು ಜಲಸಂಪನ್ಮೂಲ ಸಚಿವರು ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಗಳವಾರ ಹೇಳಿದ್ದಾರೆ. ಆದರೆ, ಕರ್ನಾಟಕದ ಜಲಾಶಯದಲ್ಲಿ ಸಮರ್ಪಕ ನೀರಿಲ್ಲ ಎಂದಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಸಾಕಷ್ಟು ನೀರು ಇಲ್ಲ. ಆದರೆ ನಾವು ೧೦ ಟಿಎಂಸಿ ನೀರು ಬಿಡುತ್ತೇವೆ ಎಂದರು. ನೀರು ಯಾವಾಗ ಬಿಡುಗಡೆ ಮಾಡಲಾಗುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, ಈಗಾಗಲೇ ಕರ್ನಾಟಕ ಸರ್ಕಾರ ಈ ಕೆಲಸ ಮಾಡುತ್ತಿದೆ ಎಂದರು. ಈ ಮಧ್ಯೆ ತಮಿಳುನಾಡು ತನ್ನ ಬೆಳೆಗಳಿಗೆ ನೀರನ್ನು ಅತಿಯಾಗಿ ಬಳಸಿಕೊಂಡಿರುವುದರಿAದ ಕರ್ನಾಟಕ ಕಾವೇರಿ ನೀರು ಬಿಡಬಾರದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ.

ಏಷ್ಯನ್ ಗೇಮ್ಸ್ನಿಂದ ಹೊರಬಿದ್ದ ವಿನೇಶ್ ಫೋಗಟ್

ನವದೆಹಲಿ, ಆ. ೧೫: ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಏಷ್ಯನ್ ಗೇಮ್ಸ್ನಿಂದ ಹೊರಬಿದ್ದಿದ್ದಾರೆ. ಆಗಸ್ಟ್ ೧೩ ರಂದು ವಿನೇಶ್ ಮೊಣಕಾಲಿನ ಗಾಯಕ್ಕೆ ತುತ್ತಾಗಿದ್ದು, ಇದರಿಂದಾಗಿ ಅವರು ತಮ್ಮ ಹೆಸರನ್ನು ಹಿಂತೆಗೆದುಕೊAಡಿದ್ದಾರೆ. ಅವರ ಸ್ಥಾನಕ್ಕೆ ಜೂನಿಯರ್ ವಿಶ್ವ ಚಾಂಪಿಯನ್ ಈಗ ಕಳೆದ ಏಷ್ಯನ್ ಗೇಮ್ಸ್ನ ೫೩ ಕೆ.ಜಿ. ವಿಭಾಗದಲ್ಲಿ ಭಾಗವಹಿಸಲಿದ್ದಾರೆ. ವಿನೇಶ್ ತಮ್ಮ ಟ್ವಿಟ್ಟರ್‌ನಲ್ಲಿ ಪೋಸ್ಟ್ ಬರೆದು ಈ ಮಾಹಿತಿ ನೀಡಿದ್ದಾರೆ. ಏಷ್ಯನ್ ಗೇಮ್ಸ್ಗೆ ವಿನೇಶ್ ನೇರ ಪ್ರವೇಶ ಪಡೆದಿದ್ದರು. ಇದಕ್ಕಾಗಿ ಅವರು ಪ್ರಯೋಗಗಳನ್ನು ಮಾಡಬೇಕಾಗಿಲ್ಲ, ಆಗಸ್ಟ್ ೧೭ ರಂದು ಶಸ್ತçಚಿಕಿತ್ಸೆಗೆ ಒಳಗಾಗುವುದಾಗಿ ವಿನೇಶ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.

ಮಣಿಪುರದ ಪರಿಸ್ಥಿತಿ ಸುಧಾರಿಸುತ್ತಿದೆ : ಮೋದಿ

ನವದೆಹಲಿ, ಆ. ೧೫: ಕಳೆದ ಕೆಲವು ವಾರಗಳಿಂದ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ಮಣಿಪುರದ ಪರಿಸ್ಥಿತಿ ಇದೀಗ ಸುಧಾರಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರವು ಸಮಸ್ಯೆಗೆ ಪರಿಹಾರವನ್ನು ಕಂಡುಹಿಡಿಯಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಮತ್ತು ಈ ಪ್ರಯತ್ನಗಳನ್ನು ಮುಂದುವರಿಸುತ್ತದೆ ಎಂದು ಹೇಳಿದರು. ಕಳೆದ ಕೆಲವು ವಾರಗಳಲ್ಲಿ, ಈಶಾನ್ಯ ರಾಜ್ಯದಲ್ಲಿ ನಡೆದ ಹಿಂಸಾಚಾರದ ಅವಧಿಯಲ್ಲಿ, ವಿಶೇಷವಾಗಿ ಮಣಿಪುರದಲ್ಲಿ, ಅನೇಕ ಜನರು ಪ್ರಾಣ ಕಳೆದುಕೊಂಡರು. ನಮ್ಮ ತಾಯಿ ಮತ್ತು ಹೆಣ್ಣುಮಕ್ಕಳ ಗೌರವಕ್ಕೆ ಕುಂದುAಟಾಯಿತು. ಆದರೆ, ಕಳೆದ ಕೆಲವು ದಿನಗಳಲ್ಲಿ ಅಲ್ಲಿ ಪರಿಸ್ಥಿತಿ ಶಾಂತಗೊಳ್ಳುತ್ತಿದೆ ಎಂದರು.