ಮಡಿಕೇರಿ, ಆ. ೧೫: ಜಿಲ್ಲೆಯಲ್ಲಿ ಮಳೆ ಕೊರತೆ ಉಂಟಾಗಿರುವ ಹಿನ್ನೆಲೆ ಕಕ್ಕಬ್ಬೆಯ ಪಾಡಿ ಶ್ರೀ ಇಗ್ಗುತಪ್ಪ ದೇವಸ್ಥಾನದಲ್ಲಿ ತಾ. ೧೭ರಂದು ಬೆಳಿಗ್ಗೆ ೧೦ ಗಂಟೆಗೆ ಅಖಿಲ ಕೊಡವ ಸಮಾಜ ನೇತೃತ್ವದಲ್ಲಿ ಸಾಮೂಹಿಕ ಪ್ರಾರ್ಥನೆ ಹಮ್ಮಿಕೊಳ್ಳಲಾಗಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅಖಿಲ ಕೊಡವ ಸಮಾಜ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ಕೊಡಗಿನಲ್ಲಿ ಹಿಂದೆAದೂ ಕಂಡು ಕೇಳರಿಯದ ರೀತಿಯಲ್ಲಿ ಮಳೆಯ ಕೊರತೆ ಕಾಣಿಸಿಕೊಂಡಿದ್ದು, ಮಳೆಯ ಕೊರತೆಯಿಂದ ಭತ್ತ ಬೆಳೆಯುವ ಪ್ರದೇಶ ಭಾಗಶಃ ಪಾಳು ಬಿದ್ದಿದೆ. ಕಾಫಿ, ಕರಿಮೆಣಸು, ಏಲಕ್ಕಿಗೂ ಬಿಸಿ ತಟ್ಟಿದೆ. ಇಷ್ಟು ಮಾತ್ರವಲ್ಲ ಮುಂದೆ ಕುಡಿಯುವ ನೀರಿಗೂ ಹಾಹಾಕಾರ ಎದುರಾಗಲಿದೆ. ಮಾನವ ಕುಲ ಮಾತ್ರವಲ್ಲ ಪ್ರಾಣಿಪಕ್ಷಿಗಳಿಗೂ ಕೂಡ ನೀರಿಲ್ಲದೆ ಪರಿತಪಿಸುವ ಸೂಚನೆ ಕಾಣುತ್ತಿದೆ. ಇದನ್ನು ಮನಗಂಡು ಇಗ್ಗುತಪ್ಪನಲ್ಲಿ ಮೊರೆ ಹೋಗುತ್ತಿದ್ದೇವೆ ಎಂದು ತಿಳಿಸಿದ್ದಾರೆ.