ಮಡಿಕೇರಿ, ಆ. ೧೫: ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕದ ವತಿಯಿಂದ ಮಾದಾಪುರದ ಶ್ರೀಮತಿ ಡಿ. ಚೆನ್ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಛಾಯಾಗ್ರಹಣ ದಿನಾಚರಣೆ ಅಂಗವಾಗಿ ತಾ.೧೮ ರಂದು ಬೆಳಿಗ್ಗೆ ೧೧ ಗಂಟೆಗೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ವೀರಾಜಪೇಟೆಯ ಪಕ್ಷಿ ಛಾಯಾಗ್ರಾಹಕರು, ಲೇಖಕ ಡಾ.ಎಸ್.ವಿ. ನರಸಿಂಹನ್ ಉದ್ಘಾಟಿಸಲಿದ್ದಾರೆ. ಶ್ರೀಮತಿ ಡಿ.ಚೆನ್ನಮ್ಮ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕರ್ನಲ್ ಬಿ.ಜಿ.ವಿ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ. ಮುರಳೀಧರ್, ಡಿ.ಚೆನ್ಮಮ್ಮ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮಂದಪ್ಪ, ಮುಖ್ಯ ಶಿಕ್ಷಕಿ ರೇವತಿ, ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು ಪಾಲ್ಗೊಳ್ಳಲಿದ್ದಾರೆ.
ವಿಶ್ವ ಛಾಯಾಗ್ರಹಣ ದಿನಾಚರಣೆ ಅಂಗವಾಗಿ ಕುಶಾಲನಗರ ತಾಲೂಕಿನ ಛಾಯಾಗ್ರಾಹಕರಾದ ಎಂ.ಬಿ. ವಿನ್ಸೆಂಟ್, ವಿಶ್ವಕುಮಾರ್ ಅವರನ್ನು ಸನ್ಮಾನಿಸಲಾಗುತ್ತಿದೆ.
ವಿದ್ಯಾರ್ಥಿಗಳಿಗೆ ಆಯೋಜಿತ ಛಾಯಾಚಿತ್ರ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮತ್ತು ಆಯ್ದ ಛಾಯಾಚಿತ್ರಗಳ ಪ್ರದರ್ಶನ ಆಯೋಜಿಸಲ್ಪಟ್ಟಿದೆ.