ಕೂಡಿಗೆ, ಆ.೧೫: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕುಶಾಲನಗರ ಪುರಸಭೆಯ ಕಸ ವಿಲೇವಾರಿ ಘಟಕದ ಪಕ್ಕದ ಜಮೀನಿನಲ್ಲಿ ಮನೆ ನಿರ್ಮಿಸಿಕೊಂಡು ವಾಸಿಸುತ್ತಿರುವ ಕುಟುಂಬದವರಿಗೆ ಕಸ ವಿಲೇವಾರಿ ಘಟಕದಿಂದ ಯಾವುದೇ ರೀತಿಯ ತೊಂದರೆಗಳು ಮತ್ತು ದುರ್ವಾಸನೆ ಬಾರದ ಹಾಗೆ ಮುನ್ನೆಚ್ಚರಿಕೆ ಕ್ರಮವಾಗಿ ಕುಶಾಲನಗರ ಪುರಸಭೆಯ ವತಿಯಿಂದ ಕ್ರಿಮಿನಾಶಕ ಔಷಧಿ ಸಿಂಪಡಣೆ ಮಾಡಲಾಗುತ್ತಿದೆ.

ಭುವನಗಿರಿ ಗ್ರಾಮದಲ್ಲಿರುವ ಕಸ ವಿಲೇವಾರಿ ಘಟಕದಲ್ಲಿ ಮತ್ತು ಸಮೀಪದ ಮನೆಗಳಿಗೆ ನೊಣಗಳ ಕಾಟ ಹೆಚ್ಚಾಗುತ್ತಿರುವುದನ್ನು ಗಮನಿಸಿ ಪುರಸಭೆಯ ಆರೋಗ್ಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಕಸ ವಿಲೇವಾರಿ ಘಟಕದ ಸುತ್ತಲಿನ ಪ್ರದೇಶಗಳಿಗೆ ಔಷಧಿ ಸಿಂಪಡಣೆ ಮತ್ತು ಡಿಡಿಟಿ ಪೌಡರ್ ಹಾಕುವಿಕೆಯ ಕಾರ್ಯದಲ್ಲಿ ತೊಡಗಿದ್ದಾರೆ ಇದರ ಮೂಲಕ ಕಸ ವಿಲೇವಾರಿ ಘಟಕದಲ್ಲಿ ಮತ್ತು ಸುತ್ತಮುತ್ತಲಿನ ಗ್ರಾಮಗಳಿಗೆ ಯಾವುದೇ ತೊಂದರೆ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ.

ಈ ಸಂದರ್ಭ ಆರೋಗ್ಯ ಅಧಿಕಾರಿ ಉದಯಕುಮಾರ್ ಸೇರಿದಂತೆ ಸಿಬ್ಬಂದಿ ವರ್ಗದವರು ಹಾಜರಿದ್ದರು.