ಮಡಿಕೇರಿ, ಆ. ೧೪: ಶಕ್ತಿ ವೃದ್ಧಾಶ್ರಮದ ಹಿರಿಯರಿಗೆ ಸ್ವೆಟರ್ ವಿತರಿಸುವ ಮೂಲಕ ದಲಿತ ಸಂಘರ್ಷ ಸಮಿತಿಯ ತಾಲೂಕು ಸಂಚಾಲಕ ದೀಪಕ್ ಪೊನ್ನಪ್ಪ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.

ಈ ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ್ದ ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕ ಶ್ರೀನಿವಾಸ್ ಮಾತನಾಡಿ, ವೃದ್ಧಾಶ್ರಮವು ದೇವಾಲಯಕ್ಕೆ ಸಮನಾಗಿದ್ದು, ಮುಂದಿನ ದಿನಗಳಲ್ಲಿ ತಮ್ಮ ಕುಟುಂಬದ ಸದಸ್ಯರ ಹುಟ್ಟುಹಬ್ಬವನ್ನು ಆಶ್ರಮದಲ್ಲಿ ಆಚರಿಸುವುದಾಗಿ ಹೇಳಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸ್ತಿçà ರೋಗ ತಜ್ಞೆ ಮತ್ತು ಪ್ರಸೂತಿ ವೈದ್ಯೆ ಡಾ. ಸೌಮ್ಯಪ್ರಕಾಶ್ ಮಾತನಾಡಿ, ಹುಟ್ಟುಹಬ್ಬವನ್ನು ವಿಭಿನ್ನವಾಗಿ ಆಚರಿಸಿಕೊಂಡು ಬರುತ್ತಿರುವ ಸಮಿತಿಯ ಪದಾಧಿಕಾರಿ ಗಳು ಸಮಾಜಕ್ಕೆ ಮಾದರಿಯಾಗಿದ್ದು, ಅನೇಕ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿರುವುದು ಸಮಿತಿಯ ಶ್ರೇಷ್ಠತೆಯನ್ನು ತೋರಿಸುತ್ತದೆ ಎಂದರು.

ಜಿಲ್ಲಾ ಸಂಚಾಲಕ ಹೆಚ್.ಎಲ್. ದಿವಾಕರ್ ಮಾತನಾಡಿ ತಾಲೂಕು ಸಂಚಾಲಕರಾದ ದೀಪಕ್ ಪೊನ್ನಪ್ಪರವರು ರಕ್ತದಾನ, ನೇತ್ರದಾನ, ಬಡವರಿಗೆ ಕಿಟ್ ವಿತರಣೆ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ, ಬಡ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜಿನ ಶುಲ್ಕ ನೀಡುವ ಮೂಲಕ ಹುಟ್ಟುಹಬ್ಬವನ್ನು ವಿಭಿನ್ನವಾಗಿ ಆಚರಿಸುತ್ತಿದ್ದು ಇಡೀ ಸಮಾಜಕ್ಕೆ ಮಾದರಿಯಾಗಿದ್ದಾರೆ. ಇಂತಹ ಗುಣವನ್ನು ಪ್ರತಿಯೊಬ್ಬರು ಅಳವಡಿಸಿ ಕೊಳ್ಳಬೇಕೆಂದರು.

ಕಾರ್ಯಕ್ರಮದಲ್ಲಿ ತಾಲೂಕು ಸಂಚಾಲಕರಾದ ದೀಪಕ್ ಪೊನ್ನಪ್ಪ, ನಗರ ಸಂಚಾಲಕರಾದ ಲೋಕನಾಥ್, ರಂಜಿತ್ ಕವಲಾಪರ, ಚಂದನ್ ನಂದರಬೆಟ್ಟು, ಮನೋಜ್ ಮತ್ತಿತರರಿದ್ದರು.

ಕಾರ್ಯಕ್ರಮದ ಕೊನೆಯಲ್ಲಿ ಕೇಕ್ ವಿತರಿಸಿ, ಸ್ವೆಟರ್ ವಿತರಿಸಲಾಯಿತು. ಕಾರ್ಯಕ್ರಮವನ್ನು ಸಮಿತಿಯ ಮೇಲ್ವಿಚಾರಕ ಸತೀಶ್ ಅವರು ನಿರೂಪಿಸಿದರು.