ಮಡಿಕೇರಿ, ಆ. ೧೫: ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ‍್ಯೋತ್ಸವ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಹಲವು ಸ್ಪರ್ಧೆಗಳನ್ನು ಆಯೋಜಿಸಿ ವಾರವಿಡೀ ಸಂಭ್ರಮಿಸಲಾಗುತ್ತಿದೆ. ಮುಖ್ಯವಾಗಿ ಫ್ಯಾನ್ಸಿ ಡ್ರೆಸ್ ಕಾಂಪಿಟೇಶನ್ (ಛದ್ಮ ವೇಷ) ಹಾಗೂ ಸೋಲೋ ಡ್ಯಾನ್ಸ್ (ಏಕ ವ್ಯಕ್ತಿ ನೃತ್ಯ) ಕಾಂಪಿಟೇಶನ್‌ಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಸಂಭ್ರಮಿಸಿದರು.