ಮಡಿಕೇರಿ, ಆ. ೧೬ : ಮಡಿಕೇರಿ ೬೬/೧೧ಕೆವಿ ವಿದ್ಯುತ್ ಉಪ-ಕೇಂದ್ರದಿAದ ಹೊರಹೋಗುವ ಎಫ್೧೨ ರಾಜಾಸೀಟ್ ಫೀಡರ್‌ನಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ತಾ. ೧೭ ರಂದು (ಇಂದು) ಬೆಳಿಗ್ಗೆ ೧೦ ರಿಂದ ಸಂಜೆ ೪.೩೦ ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.

ಗಾಂಧಿ ಮೈದಾನ, ಡಿ.ಸಿ. ಆಫೀಸ್, ಇಂದಿರಾನಗರ, ರೇಸ್‌ಕೋರ್ಸ್ ರಸ್ತೆ, ಗಾಳಿಬೀಡು, ಹೊಸಬಡಾವಣೆ, ವಿದ್ಯಾನಗರ, ಎಫ್‌ಎಂಸಿ ಕಾಲೇಜು, ಐಟಿಐ ಹಾಗೂ ಸುತ್ತಮುತ್ತಲ÷ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.