ಸೋಮವಾರಪೇಟೆ, ಆ. ೧೬: ಇಲ್ಲಿನ ಜೆಸಿಐ ಸೋಮವಾರಪೇಟೆ ಪುಷ್ಪಗಿರಿ ಮತ್ತು ಲಯನ್ಸ್ ಸಂಸ್ಥೆಯ ಸಹಯೋಗದಲ್ಲಿ, ಚಿಕ್ಕಮಗಳೂರಿನ ಡೆಲ್ಟಾ ಕಣ್ಣಿನ ಕೇಂದ್ರದ ಆಶ್ರಯದಲ್ಲಿ ಪಟ್ಟಣದ ಅಟಲ್ ಜೀ ಭವನದಲ್ಲಿ ಸಾರ್ವಜನಿಕರಿಗೆ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಿತು.
ಲಯನ್ಸ್ ಸಂಸ್ಥೆಯ ಅಧ್ಯಕ್ಷ ಮಹೇಶ್ ಅವರು ಶಿಬಿರದ ಉದ್ಘಾಟನೆ ನೆರವೇರಿಸಿ ಮಾತನಾಡಿ, ಸಂಸ್ಥೆಯು ಹಲವಷ್ಟು ವರ್ಷಗಳಿಂದ ಸಮಾಜಮುಖಿ ಕಾರ್ಯವನ್ನು ಮಾಡಿಕೊಂಡು ಬರುತ್ತಿದೆ. ಸೋಮವಾರಪೇಟೆಯಲ್ಲಿ ಮೂರು ಶಿಬಿರಗಳನ್ನು ಆಯೋಜಿಸಲಾಗಿದ್ದು, ನೂರಾರು ಮಂದಿ ಪ್ರಯೋಜನ ಪಡೆದುಕೊಂಡಿದ್ದಾರೆ ಎಂದರು.
ಜೆಸಿಐ ಸೋಮವಾರಪೇಟೆ ಪುಷ್ಪಗಿರಿ ಸಂಸ್ಥೆಯ ಅಧ್ಯಕ್ಷೆ ರುಬೀನಾ ಎಂ.ಎ ಮಾತನಾಡಿ, ೪೭ ವರ್ಷ ಪೂರೈಸುತ್ತಿರುವ ಜೆಸಿಐ ಸಂಸ್ಥೆಯು ಜನಸಾಮಾನ್ಯರಿಗೆ ಎಟುಕುವಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ. ಸಾರ್ವಜನಿಕ ನೇತ್ರ ತಪಾಸಣಾ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕೆಂದರು.
ಲಯನ್ಸ್ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ಲೋಹಿತ್, ಡೆಲ್ಟಾ ಕಣ್ಣಿನ ಕೇಂದ್ರದ ಮುಖ್ಯಸ್ಥೆ ಪೂಜಾ, ಯೋಗೇಶ್, ತೇಜಸ್ವಿ ಮತ್ತು ಲಯನ್ಸ್ ಸಂಸ್ಥೆಯ ಪದಾಧಿಕಾರಿಗಳು, ಜೆಸಿಐ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ೧೨೧ ಮಂದಿ ಶಿಬಿರದ ಸದುಪಯೋಗ ಪಡೆದುಕೊಂಡರು.