ಮಡಿಕೇರಿ, ಆ. ೧೬ : ನರಿಯಂದಡ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾಗಿದ್ದ ಮನೋಹರ್ ನಾಯ್ಕ್ ಮೇಲೆ ನಡೆದ ಹಲ್ಲೆ, ದೌರ್ಜನ್ಯ, ಜಾತಿ ನಿಂದನೆ ಹಾಗೂ ಪೋಕ್ಸೋ ಪ್ರಕರಣವನ್ನು ಸಿಓಡಿ ತನಿಖೆಗೆ ವಹಿಸುವಂತೆ ಕರ್ನಾಟಕ ರಾಜ್ಯ ಬಂಜಾರ ಯುವಕರ ಮತ್ತು ವಿದ್ಯಾರ್ಥಿ ಸಂಘ ಆಗ್ರಹಿಸಿದೆ.

ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಡಿ.ಆರ್.ಗಿರೀಶ್, ನರಿಯಂದಡ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾಗಿ ಮನೋಹರ್ ನಾಯ್ಕ್ ಕಳೆದ ಹಲವು ವರ್ಷಗಳಿಂದ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಾ ಬಂದಿದ್ದು, ಅವರ ಮೇಲೆ ದುರುದ್ದೇಶಪೂರಿತವಾಗಿ ಮಕ್ಕಳಿಗೆ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಲಾಗಿದೆ. ಭ್ರಷ್ಟಾಚಾರಕ್ಕೆ ಸಹಕರಿಸದೆ, ಅನ್ಯಾಯ ಅಕ್ರಮಗಳ ಕುರಿತು ಮನೋಹರ್ ನಾಯ್ಕ್ ಪ್ರಶ್ನಿಸುತ್ತಿದ್ದರು. ಇದರಿಂದಾಗಿ ಆಡಳಿತ ಮಂಡಳಿಯ ಕೆಲ ಸದಸ್ಯರು ಇಲ್ಲಸಲ್ಲದ ಆರೋಪ ಹೊರಿಸಿದ್ದಾರೆ ಎಂದು ಹೇಳಿದರು. ಪ್ರಕರಣದ ಕುರಿತು ಸಿಓಡಿ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದ್ರು.

ಸುದ್ದಿಗೋಷ್ಠಿಯಲ್ಲಿ ಸಂಘದ ಪ್ರಮುಖರಾದ ಆರ್. ನಾಗರಾಜ್, ಡಿ.ಜಿ ಶಾಂತನಾಯಕ್, ಚೇತನ್ ಕುಮಾರ್, ಮಂಜುನಾಥ್, ಜಿ.ಜಿ. ನಾಯಕ್ ಹಾಜರಿದ್ದರು.