ನಾಪೋಕ್ಲು: ಬಲ್ಲಮಾವಟಿ ಗ್ರಾಮ ಪಂಚಾಯಿತಿಯ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಮೇದರ ಶಾಂತಿ ಪೂವಯ್ಯ, ಹಾಗೂ ಉಪಾಧ್ಯಕ್ಷರಾಗಿ ಚೋಕಿರ ಬಾಬಿ ಭೀಮಯ್ಯ ಆಯ್ಕೆಯಾದರು. ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಆಯ್ಕೆ ಪ್ರಕ್ರಿಯೆ ನಡೆಯಿತು. ಚುನಾವಣಾ ಅಧಿಕಾರಿಯಾಗಿ ಮಡಿಕೇರಿ ತಾಲೂಕು ತಹಶೀಲ್ದಾರ್ ಪ್ರವೀಣ್ ಕುಮಾರ್ ಕಾರ್ಯನಿರ್ವಹಿಸಿದರು.

ಈ ಸಂದರ್ಭ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಅಪ್ಪಚೆಟ್ಟೊಳಂಡ ಮನು ಮುತ್ತಪ್ಪ, ಶಕ್ತಿ ಕೇಂದ್ರದ ಪ್ರಮುಖರಾದ ಚಂಗೆಟ್ಟಿರ ಕುಮಾರ್ ಸೋಮಣ್ಣ, ಬಿಜೆಪಿ ಜಿಲ್ಲಾ ಸಮಿತಿ ಸದಸ್ಯರಾದ ಕರವಂಡ ಲವ ನಾಣಯ್ಯ, ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣಗಳ ಸದಸ್ಯರಾದ ಕರವಂಡ ಅಪ್ಪಣ್ಣ, ಬೂತ್ ಅಧ್ಯಕ್ಷರಾದ ಚಿಯಂಡಿರ ದಿನೇಶ್ ಹಾಗೂ ಗ್ರಾಮ ಪಂಚಾಯಿತಿಯ ಸದಸ್ಯರು, ಬಿಜೆಪಿಯ ಮುಖಂಡರು ಕಾರ್ಯಕರ್ತರು ಭಾಗಿಯಾಗಿದ್ದರು.

ಕಿರಗಂದೂರು ಗ್ರಾ.ಪಂ. ಅಧ್ಯಕ್ಷ-ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತರ ಆಯ್ಕೆ

ಸೋಮವಾರಪೇಟೆ: ಸಮೀಪದ ಕಿರಗಂದೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ತಾರಾ ಸುಧೀರ್ ಹಾಗೂ ಉಪಾಧ್ಯಕ್ಷರಾಗಿ ಎಂ.ಎA. ಬೆಳ್ಳಿಯಪ್ಪ ಅವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಅವಿರೋಧ ಆಯ್ಕೆ ನಡೆಯಿತು. ಚುನಾವಣಾಧಿಕಾರಿಯಾಗಿ ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಮಂಜುನಾಥ್ ಶೆಟ್ಟಿ ಕಾರ್ಯನಿರ್ವಹಿಸಿದರು. ಪಿಡಿಓ ರಜಿನಿ, ಕಾರ್ಯದರ್ಶಿ ಎನ್.ಎ. ಕೃಷ್ಣಪ್ಪ ಸಹಕರಿಸಿದರು. ಮಾಜಿ ಅಧ್ಯಕ್ಷ ರಘು, ಮಾಜೀ ಉಪಾಧ್ಯಕ್ಷೆ ಸುಧಾರಾಣಿ, ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಸುಧೀರ್, ಬಿ.ಕೆ. ರಮೇಶ್, ಎಸ್.ಎಂ. ಪೂವಯ್ಯ, ಹೆಚ್.ಬಿ. ಶಿವಕುಮಾರ್, ರಾಜ್‌ಕುಮಾರ್, ಕೌಶಿಕ್, ರೋಷನ್, ಎಸ್.ಪಿ. ಪೊನ್ನಪ್ಪ, ಚಿದಾನಂದ, ಎಸ್.ಕೆ. ಪೂವಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕೊಡಗರಹಳ್ಳಿ ಗ್ರಾ.ಪಂ. ಅಧ್ಯಕ್ಷರಾಗಿ ನಿರತ

ಸುಂಟಿಕೊಪ್ಪ: ಕೊಡಗರಹಳ್ಳಿ ಗ್ರಾಮ ಪಂಚಾಯಿತಿಯ ೨ನೇ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಪಕ್ಷೇತರ ಸದಸ್ಯೆ ನಿರತ ಹಾಗೂ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಬ್ಬಾಸ್ ಆಯ್ಕೆಯಾಗಿದ್ದಾರೆ.ಸುಂಟಿಕೊಪ್ಪ ಅಧ್ಯಕ್ಷ - ಉಪಾಧ್ಯಕ್ಷರಿಂದ ಅಧಿಕಾರ ಸ್ವೀಕಾರ

ಸುಂಟಿಕೊಪ್ಪ, ಆ. ೧೬: ಸುಂಟಿಕೊಪ್ಪ ಗ್ರೇಡ್ ೧ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಪಿ.ಆರ್. ಸುನಿಲ್‌ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಶಿವಮ್ಮ ಮಹೇಶ್ ಅಧಿಕಾರ ವಹಿಸಿಕೊಂಡರು. ಸುಂಟಿಕೊಪ್ಪ ಗ್ರಾಮ ೨ನೇ ಅವಧಿ ಆಡಳಿತ ಮಂಡಳಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಮತದಾನದಲ್ಲಿ ಆಯ್ಕೆಗೊಂಡ ಪಿ.ಆರ್. ಸುನಿಲ್ ಕುಮಾರ್ ಅವರಿಗೆ ಮಾಜಿ ಅಧ್ಯಕ್ಷೆ ಶಿವಮ್ಮ ಮಹೇಶ್ ಅವರು ಪಂಚಾಯಿತಿ ಕಾನೂನು ಪುಸ್ತಕವನ್ನು ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು. ಉಪಾಧ್ಯಕ್ಷರಾಗಿ ಆಯ್ಕೆಗೊಂಡ ಶಿವಮ್ಮ ಮಹೇಶ್ ಅವರಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೇಣುಗೋಪಾಲ್ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭ ಪಂಚಾಯಿತಿ ಸದಸ್ಯರುಗಳಾದ ಬಿ.ಎಂ. ಸುರೇಶ್, ಮಂಜುನಾಥ್, ರಫೀಕ್‌ಖಾನ್, ಸೋಮನಾಥ್, ವಸಂತಿ, ಶಾಂತಿ, ಗೀತಾ, ಮಂಜುಳ, ರೇಷ್ಮ, ಮಾಜಿ ಸದಸ್ಯ ಪಿ.ಆರ್. ಸುಕುಮಾರ್, ಕೆ.ಇ. ಕರೀಂ, ರಹೆನಾ ಸುಲ್ತಾನ್, ಬಿಜೆಪಿ ಪಕ್ಷದ ಹಿರಿಯ ಮುಖಂಡ ವೈ.ಎಂ. ಕರುಂಬಯ್ಯ, ಸುಂಟಿಕೊಪ್ಪ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಡಿ.ನರಸಿಂಹ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೇಣುಗೋಪಾಲ್, ಪಂಚಾಯಿತಿ ಸಿಬ್ಬಂದಿಗಳು, ಪೌರಕಾರ್ಮಿಕರು ಇದ್ದರು.