ಕೂಡಿಗೆ, ಆ. ೧೬: ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಪರಿಣಾಮಕಾರಿ ಮಿಷನ್ ಇಂದ್ರ ಧನುಷ್ ೫.೦ ಅಭಿಯಾನ ಕಾರ್ಯಕ್ರಮವು ಅಂಗನವಾಡಿ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಸದಸ್ಯರಾದ ಶಿವಣ್ಣ ಚಾಲನೆ ನೀಡಿ ಆರೋಗ್ಯ ಮಹತ್ವವನ್ನು ತಿಳಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯೆದ್ಯಾಧಿಕಾರಿ ಡಾ. ತೇಜಶ್ರೀ, ಆರೋಗ್ಯ ಇಲಾಖೆಯ ಯೋಜನೆಯ ಮಹತ್ವ, ಪರಿಣಾಮಕಾರಿ ಮಿಷನ್ ಇಂದ್ರ ಧನುಷ್ ೫.೦ ಅಭಿಯಾನದ ಸಮಗ್ರವಾದ ಮಾಹಿತಿಯನ್ನು ನೀಡಿದರು.
ಈ ಸಂದರ್ಭ ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾ ಅಧಿಕಾರಿ ವಿಶ್ವಜ್ಞ, ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾ ಅಧಿಕಾರಿಗಳಾದ ಚಂದ್ರೇಶ್ , ಮುಕೇಶ್, ಸಕೀನ, ಆಶಾ ಕಾರ್ಯಕರ್ತೆಯರಾದ ಪ್ರಿಯ, ಸುನಂದಾ, ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರಾದ ಸರಸ, ಉಷಾ ಅವರು ಹಾಜರಿದ್ದರು.