ಸೋಮವಾರಪೇಟೆ, ಆ. ೧೫: ಸಮೀಪದ ನೇರುಗಳಲೆ ಗ್ರಾಮ ಪಂಚಾಯಿತಿಯ ಗ್ರಂಥಾಲಯದಲ್ಲಿ ಗ್ರಂಥಾಲಯದ ಪಿತಾಮಹ ಪದ್ಮಶ್ರೀ ಡಾ. ಎಸ್. ಆರ್. ರಂಗನಾಥ್ ರವರ ಜನ್ಮದಿನದ ಅಂಗವಾಗಿ ಗ್ರಂಥಪಾಲಕರ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ವಿನೋದ್ ವಹಿಸಿದ್ದರು.

ನಂತರ ಮಾತನಾಡಿದ ಅವರು, ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಗ್ರಂಥಾಲಯದ ಮಹತ್ವದ ಬಗ್ಗೆ ಅರಿತುಕೊಳ್ಳಬೇಕು. ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು. ಗ್ರಂಥಾಲಯ ಮೇಲ್ವಿಚಾರಕಿ ಪದ್ಮಾವತಿ ಅವರು ಡಾ. ಎಸ್. ಆರ್. ರಂಗನಾಥ್ ಅವರ ವ್ಯಕ್ತಿ ಪರಿಚಯ ಮಾಡಿದರು. ಕಾರ್ಯಕ್ರಮದಲ್ಲಿ ಗ್ರಾಮೀಣ ಭಾಗದ ಓದುಗರು, ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.